ನಮ್ಮೆಲ್ಲರ ಜೀವನಾಡಿಯಾಗಿರುವ ಕೆರೆಗೆ ಬಾಗಿನ ಸಮರ್ಪಣೆ…
ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಜವಾಹರ್ ಕೆರೆಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಬಾಗಿನ ಅರ್ಪಿಸಿ, ಕ್ಷೇತ್ರದ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಈ ಬಾರಿ ಸುರಿದ ಉತ್ತಮ ಮಳೆಯಿಂದಾಗಿ, ಜವಾಹರ್ ಕೆರೆ ಭರ್ತಿಯಾಗಿರುವುದು ಸಂತಸದ ಸಂಗತಿ. ಇದರಿಂದ ನಿಪ್ಪಾಣಿ ನಗರದ ಜನತೆಗೆ ಅನುಕೂಲವಾಗಲಿದೆ. ಜನರ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗುತ್ತದೆ. ಹೀಗಾಗಿ ಕೆರೆ ನೀರನ್ನು ಸರ್ವರೂ, ಹಿತ-ಮಿತವಾಗಿ ಸದ್ಭಳಕೆ ಮಾಡಿ. ಆರೋಗ್ಯಕರ ಜೀವನ ನಿಮ್ಮದಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು, ಸದಸ್ಯರು, ಊರಿನ ಗಣ್ಯರು, ಜನಪ್ರತಿನಿಧಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ