ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ ಚೀಟಿ ರದ್ದು..
ಗ್ರಾಮೀಣ ಭಾಗದ ಜನರಿಗೆ ಕೋವಿಡ್ ಲಸಿಕೆ ಭಯ ಹೋಗಲಾಡಿಸಬೇಕು ಕಡ್ಡಾಯವಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಜನರ ಮನಸಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಮತ್ತು ಮೂರನೇ ಅಲೆ ತಡೆಗಟ್ಟುವ ಹಿನ್ನೆಲೆಯಲ್ಲಿ ಎಲರೂ ಲಸಿಕೆ ಪಡೆಯಬೇಕು ಎಂದು ತಾಲೂಕ ತಹಸೀಲ್ದಾರ್ ಶ್ರೀಶೈಲ್ ತಳವಾರ್ ಅವರು ಮಾತನಾಡಿದರು. ಯಲಬುರ್ಗಾ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳು ಸಭೆಯಲ್ಲಿ ಮಾತನಾಡಿದರು. ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ತಲಾ ಐದು ಗ್ರಾಮಪಂಚಾಯಿತಿಗಳಲ್ಲಿ ಸಂಪೂರ್ಣ ಕೋವಿಡ್ ಲಸಿಕೆ ಮುಕ್ತ ಗ್ರಾಮವನ್ನಾಗಿ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ. ತಾಲೂಕ್ ಪಂಚಾಯಿತಿ ಇ ಒ ಸೋಮಶೇಖರ್ ಬಿರಾದಾರ್ ಅವರು ಮಾತನಾಡಿ ಹತ್ತು ಗ್ರಾಮ ಪಂಚಾಯಿತಿಗಳಲ್ಲಿ ಶೇಕಡ ನೂರರಷ್ಟು ಕೋವಿಡ್ ಲಸಿಕೆ ಹಾಕಿಸಬೇಕು ಮತ್ತು ಇತರೆ ಗ್ರಾಮಪಂಚಾಯಿತಿಗಳಿಗೆ ಮಾದರಿಯಾಗುವಂತೆ ಕೆಲಸ ನಿರ್ವಹಿಸಬೇಕು ಜನಸಾಮಾನ್ಯರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ತಾಲೂಕ ವೈದ್ಯಾಧಿಕಾರಿಗಳಾದ ಡಾಕ್ಟರ್ ಮಂಜುನಾಥ್ ಬ್ಯಾಲಹುಣುಸಿ ಅವರು ಮಾತನಾಡಿ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಿ ಕೊಳ್ಳುವುದಕ್ಕಾಗಿ ಸರ್ಕಾರ ಕ್ರಮಕೈಗೊಂಡಿದೆ ಅದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ವಯಿಚ್ಛೆಯಿಂದ ಹತ್ತಿರ ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಕೋವಿಡ್ ನಿರ್ಮೂಲನೆ ಸಹಕಾರಿ ಆಗಬೇಕಾಗಿದೆ ಎಂದು ಮಾತನಾಡಿದರು. ತಾಲೂಕಿನ ಸಮನ್ವಯಾಧಿಕಾರಿಗಳಾದ ಶರಣಪ್ಪ ಕೊಪ್ಪದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕರು ಶಿಕ್ಷಕರು ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಇನ್ನು ಹಲವಾರು ಉಪಸ್ಥಿತರಿದ್ದರು
ವರದಿ – ಹುಸೇನ್ ಮೋತೆಖಾನ್