ಕೂಡ್ಲಿಗಿ ತಾಲೂಕಿನ ಸೂಲದಹಳ್ಳಿಯಲ್ಲಿ ಮಾತೃ ವಂದನಾ ಕಾರ್ಯಕ್ರಮ ಯಶಸ್ವಿ…..
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಸೂಲದಹಳ್ಳಿ ಗ್ರಾಮದಲ್ಲಿ,ಮಾತೃ ಪೋಷಣ ಮಾಸಾಚರಣೆ ನಿಮಿತ್ತ ಮಾತೃವಂದನಾ ಕಾರ್ಯಕ್ರಮ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯವನ್ನೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ಧ ಬಸಪ್ಪ ಉದ್ಘಾಟಿಸಿದರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಗರ್ಭಿಣಿ ಹಾಗೂ ಬಾಣಂತಿಯರು ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಹಾಗೂ ಮಾತೃ ವಂದನಾ ಯೋಜನೆಯ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಾಧಿಕಾರಿ ಡಾ.ತ್ಯಾಗರಾಜ, ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯಶಿಕ್ಷಕ ಆಲೂರಿನ ಕಾತ್ರಿಕೆ ಲಿಂಗಪ್ಪ ಮಾತನಾಡಿ, ಗರ್ಭಿಣಿ ಹಾಗೂ ಬಾಣಂತಿಯರು ಹಣ್ಣು,ತರಕಾರಿ, ಸೊಪ್ಪುಗಳನ್ನು ಯಥೇಚ್ಛವಾಗಿ ಬಳಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.ಗರ್ಭಿಣಿ,ಬಾಣಂತಿಯರು ಕೋವಿಡ್ ಪ್ರತಿರೋಧ ಲಸಿಕೆಯನ್ನು ಹಾಕಿಸಿಕೊಳ್ಳಬೇಕು,ಜೊತೆಗೆ ಪೌಷ್ಟಿಕತೆ ಹೊಂದಿದ ಮೊಳಕೆ ಕಾಳುಗಳನ್ನು ಉಪಯೋಗಿಸಬೇಕು ಎಂದು ತಿಳಿಸಿದರು. ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮೀದೇವಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು, ಗ್ರಾಪಂ ಸದಸ್ಯರು,ಸಹಿಪ್ರಾ ಶಾಲೆ ಸಹ ಶಿಕ್ಷಕ ದೊಡ್ಡಪ್ಪ,ಹೆಚ್.ಎಮ್.ವಿ ಪೊನ್ನಮ್ಮ ,ಮಂಜುನಾಥ,ಸಿ.ಎಸ್. ಸಿ.ಉಜ್ಜಯಿನಿ ಕೆ.ಎಂ.ನಟರಾಜ್, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.ಓಬಮ್ಮ,ದಾಕ್ಷಾಯಿಣಿ ಪ್ರಾರ್ಥಿಸಿದರು.ಮಾಲಾ ಸ್ವಾಗತಿಸಿದರು,ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು.✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ