“ಅನ್ನದಾತರ ಸಮಸ್ಯೆಗಳನ್ನು ಅರಿಯಲು “ರೈತರೊಂದಿಗೊಂದು ದಿನ” ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದೆ”
ನಿಪ್ಪಾಣಿ ಮತಕ್ಷೇತ್ರದ ಭೀವಶಿ ಗ್ರಾಮಕ್ಕೆ” ರೈತರೊಂದಿಗೊಂದು ದಿನ” ಕಾರ್ಯಕ್ರಮದ ಅಂಗವಾಗಿ ಕೃಷಿ ಸಚಿವರಾದ ಶ್ರೀ ಬಿ.ಸಿ. ಪಾಟೀಲ್ ಜಿ ಅವರೊಂದಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿದಾಗ, ಕುಂಭ ಮೇಳ ಹಾಗೂ ವಾದ್ಯಗಳ ಸಾಂಪ್ರಾದಾಯಿಕ ಎತ್ತಿನಗಾಡಿ ಮೆರವಣಿಗೆ ಮೂಲಕ ಗ್ರಾಮಸ್ಥರು ನಮ್ಮನ್ನು ಸ್ವಾಗತಿಸಿದರು. ಬಳಿಕ ಕೃಷಿಕರಾದ ಶ್ರೀ ನರಸಿಂಹ ಯಶವಂತ ಚೌಗಲೆ ಅವರ ಜಮೀನಿನಲ್ಲಿ ಕಬ್ಬಿನ ಬೆಳೆಯ ವಿವಿಧ ನಾಟಿ ಪದ್ಧತಿಗಳ ಪ್ರಾತ್ಯಕ್ಷಿಕೆ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ಇದೇ ವೇಳೆ ಕಬ್ಬಿನ ನಾಟಿ ಪದ್ಧತಿಗಳ ಕುರಿತ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಳೆಯುತ್ತಿರುವುದು ಅರ್ಥಪೂರ್ಣವಾಗಿದೆ. ನಿಪ್ಪಾಣಿ ಕ್ಷೇತ್ರ ಐದಾರು ವರ್ಷಗಳಿಂದ ಪ್ರವಾಹಕ್ಕೆ ತುತ್ತಾದ ಪರಿಣಾಮ ರೈತರು ಕಷ್ಟದಲ್ಲಿದ್ದಾರೆ. ಗಡಿಭಾಗ ಆಗಿರುವುದರಿಂದ ಇಲ್ಲಿನ ರೈತರಿಗೆ ಹೆಚ್ಚಿನ ನೆರವಿನ ಅಗತ್ಯವಿದೆ. ಇಂತಹ ಕಾರ್ಯಕ್ರಮಗಳಿಂದ ಅನ್ನದಾತರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಶ್ರೀ ಶಿವನಗೌಡ ಪಾಟೀಲ, ಉಪ ಕೃಷಿ ನಿರ್ದೇಶಕರಾದ ಶ್ರೀ ಎಚ್. ಡಿ. ಕೊಳೆಕರ್, ಶ್ರೀ ಎಲ್.ಆಯ್. ರೂಡಗಿ, ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಮಂಜುನಾಥ ಜನಕಟ್ಟಿ, ಗಣ್ಯರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ