ಕೊಪ್ಪಳ : ಸಾಹಿತ್ಯ ಭವನದಲ್ಲಿ ಪೌರ ಕಾರ್ಮಿಕರ ದಿನಾಚರಣೆ.
ಕೊಪ್ಪಳ. ಸೆ.29. ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ ಕೊಪ್ಪಳ ಶಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಸೆ.30 ರಂದು ಗುರುವಾರ ಬೆಳಿಗ್ಗೆ 10.30 ಕ್ಕೆ ನಗರದ ಅಶೋಕ್ ವೃತ್ತದ ಬಳಿಯ ಸಾಹಿತ್ಯ ಭವನದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಕೊಪ್ಪಳ ಶಾಖೆ ಅಧ್ಯಕ್ಷ ಶಿವಪ್ಪ ಗಿಣಿಗೇರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಕೆ. ರಾಘವೇಂದ್ರ ಬಿ.ಹಿಟ್ನಾಳ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ. ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ. ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ. ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು. ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ. ಬಸವರಾಜ ಪಾಟೀಲ್ ಇಟಗಿ.ಡಾ. ಚಂದ್ರಶೇಖರ ಬಿ ಪಾಟೀಲ್. ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತುಂಗಭದ್ರ ಯೋಜನೆ (ಕಾಡಾ) ಮುನಿರಾಬಾದ್ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಂ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ. ನಗರಸಭೆ ಅಧ್ಯಕ್ಷೆ ಶ್ರೀಮತಿ ಲತಾ ಗವಿಸಿದ್ದಪ್ಪ ಚಿನ್ನೂರು. ಉಪಾಧ್ಯಕ್ಷೆ ಶ್ರೀಮತಿ ಝರೀನಾ ಬೇಗಂ ಖಾಜಾಸಾಬ್ ಅರಗಂಜಿ. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ್ ಬಿ. ಪಾಟೀಲ್. ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ವಿ. ರಶ್ಮಿ. ಮಹೇಶ್. ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಝಿಯಾ ತರನುಮ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಂ. ಗಂಗಪ್ಪ. ನಗರಸಭೆ ಪೌರಾಯುಕ್ತ ರಮೇಶ್ ಬಡಿಗೇರ್ ಹಾಗೂ ನಗರಸಭೆ ಸರ್ವ ಸದಸ್ಯರು ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ವರದಿ – ಎಸ್.ಎ.ಗಫರ್