ಯಕ್ಸಂಬಾ“ಸಂಸ್ಥೆಯ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ನಮ್ಮ ಕುಟುಂಬ ಸದಸ್ಯರಿದ್ದಂತೆ”
ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಅಪಘಾತ ಹಾಗೂ ಅಕಾಲಿಕ ಮರಣದಿಂದಾಗಿ ಅಗಲಿದ ನಮ್ಮ ಸಂಸ್ಥೆಯ ಸದಸ್ಯರು, ನಿರ್ದೇಶಕರು ಹಾಗೂ ಸಿಬ್ಬಂದಿಯ ಕುಟುಂಬಕ್ಕೆ 4 ಕೋಟಿ 36 ಲಕ್ಷ ರೂ. ಮೊತ್ತದ ಮರಣ ವಿಮೆಯ ಚೆಕ್ ವಿತರಿಸಿದರು. ಸಂಸ್ಥೆಯ ಪ್ರತಿಯೊಬ್ಬ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ಜೊಲ್ಲೆ ಕುಟುಂಬ ಸದಸ್ಯರು ಎಂಬ ಸಮಾನತೆಯ ಭಾವದಿಂದ ಕಾಣುವ ಪರಿವಾರ ನಮ್ಮದು. ಹೀಗಾಗಿ ನಮ್ಮ ಸಂಸ್ಥೆಗಳ ಏಳಿಗೆಗೆ ಶ್ರಮಿಸುತ್ತಿರುವ ಸರ್ವರ ಬಗ್ಗೆ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ. ಅಪಘಾತ, ಅಕಾಲಿಕ ಮರಣದಿಂದ ಸಾವನ್ನಪ್ಪಿದ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿಯ ಕುಟುಂಬ ವರ್ಗಕ್ಕೆ ಸಹಾಯ ಮಾಡಿ ಅವರ ಸಂಕಷ್ಟಕ್ಕೆ ನೆರವಾಗುತ್ತಿದ್ದು, ಅವರ ಬಾಳಲ್ಲಿ ಬೆಳಕೆಂಬ ಸುದಿನ ತರಲು ಶ್ರಮವಹಿಸುತ್ತಿದ್ದೇವೆ. ಅವರ ನೋವು, ನಲಿವಿನಲ್ಲಿ ಜೊಲ್ಲೆ ಪರಿವಾರ ಸದಾ ಇರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜೊಲ್ಲೆ ಉದ್ಯೋಗ ಸಮೂಹದ ಅಂಗ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಂಚಾಲಕ ಮಂಡಳಿ ಸದಸ್ಯರು, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು,ಎಲ್ಲ ಸದಸ್ಯರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ