ಜನಸೇವೆಯೇ ಜನಾರ್ದನ ಸೇವೆ…..
ಇಂದು ನಿಪ್ಪಾಣಿ ಮತಕ್ಷೇತ್ರದ ಬೆನಾಡಿ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಮಂಜೂರಾದ 58 ಲಕ್ಷ ರೂ. ವೆಚ್ಚದಲ್ಲಿ, ಮನೆ-ಮನೆಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ನಳ ಅಳವಡಿಸುವ ಜೆ.ಜೆ.ಎಮ್. ಕಾಮಗಾರಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದರು. ಬಳಿಕ ಕೋವಿಡ್-19 ಪರಿಹಾರಾರ್ಥವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ವತಿಯಿಂದ ಅಂಗವಿಕಲರಿಗೆ ಬೂತ್ ಕಮಿಟಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಹಾಯಕಿಯರಿಗೆ, ಕೆಇಬಿ ಹಾಗೂ ಗ್ರಾ.ಪಂ. ನೌಕರರಿಗೆ ಒಟ್ಟು 262 ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ಹಾಗೂ ಕಟ್ಟಡ ಕಾರ್ಮಿಕರಿಗೆ 53 ಸುರಕ್ಷತಾ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ಫಲಾನುಭವಿಗಳು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ