ಹುಕ್ಕೇರಿ “ಪ್ರೋತ್ಸಾಹದಿಂದ ರಂಗಭೂಮಿ ಕಲೆ ಜೀವಂತ”
ಹುಕ್ಕೇರಿ ಪಟ್ಟಣದಲ್ಲಿ, ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಹುಕ್ಕೇರಿ ಹಿರೇಮಠದ ವತಿಯಿಂದ ಧಾರವಾಡ ರಂಗಾಯಣದ ನಾಟಕೋತ್ಸವ ಕಾರ್ಯಕ್ರಮದಲ್ಲಿ, ಹುಕ್ಕೇರಿ ಹಿರೇಮಠದ ಶ್ರೀ ಶ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿ ಮಠದ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಸತ್ಕಾರ ಸ್ವೀಕರಿಸಿ, ಮಾತನಾಡಿದರು. ನಾಟಕ ಜೀವಂತ ಕಲೆ. ಅದನ್ನು ಉಳಿಸಿ, ಬೆಳೆಸುವ ಜಬಾವ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ದಸರಾ ಮಹೋತ್ಸವ ಸುಸಂದರ್ಭದ ಮೂಲಕ ಹಲವಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ, ಕಲೆಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀ ಹಿರೇಮಠದ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಶಿಕಾಂತ ನಾಯಿಕ, ರಂಗಾಯಣ ಧಾರವಾಡ ದ ನಿರ್ದೇಶಕರಾದ ಶ್ರೀ ರಮೇಶ ಪರವಿನಾಯ್ಕರ ಪುರಸಭೆ ಅಧ್ಯಕ್ಷರಾದ ಶ್ರೀ ಎ. ಕೆ.ಪಾಟೀಲ, ಸ್ಥಳೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ