ನವರಾತ್ರಿ ಹಬ್ಬದ ನಿಮಿತ್ತವಾಗಿ ಶ್ರೀ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು….

Spread the love

ನವರಾತ್ರಿ ಹಬ್ಬದ ನಿಮಿತ್ತವಾಗಿ ಶ್ರೀ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು….

ಇಂದು ಚಿಕ್ಕೋಡಿ ತಾಲೂಕಿನ ಯಡೂರಿನ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳೇಶ್ವರಿ ದೇವಿಯ ದರ್ಶನ ಪಡೆದು, ನವರಾತ್ರಿ ಹಬ್ಬದ ನಿಮಿತ್ತವಾಗಿ ಶ್ರೀ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.  ಬಳಿಕ  ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಶ್ರೀಶೈಲ ಸೂರ್ಯಸಿಂಹಾಸನ ಮಠದ ಶ್ರೀ ಶ್ರೀ ಶ್ರೀ 1008 ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಸತ್ಕಾರವನ್ನು ಸ್ವೀಕರಿಸಿದರು. ಕೃಷ್ಣಾ ನದಿ ದಂಡೆಯ ಮೇಲಿರುವ ವೀರಭದ್ರೇಶ್ವರ ದೇಗುಲ ಸುಮಾರು 12ನೇ ಶತಮಾನದಲ್ಲಿ ಸ್ಥಾಪಿಸಲಾಗಿದೆ. ಪ್ರತಿನಿತ್ಯ ವೀರಭದ್ರನಿಗೆ ಭಕ್ತರ ಪರವಾಗಿ ಅಭಿಷೇಕ, ಬುಟ್ಟಿ ಪೂಜೆ, ಎಲೆ ಪೂಜೆ, ಅಕ್ಕಿ ಪೂಜೆ, ತುಲಾಭಾರ ಸೇವೆ ನೆರವೇರಿಸಲಾಗುತ್ತದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಈ ದೇಗುಲಕ್ಕೆ ಭಕ್ತರು ಆಗಮಿಸುತ್ತಿದ್ದು, ನಂಬಿದ ಭಕ್ತರ ಕೋರಿಕೆಯನ್ನು ಶ್ರೀ ದೇವರು ಈಡೇರಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *