ನಿಪ್ಪಾಣಿ “ನಮ್ಮ ದೇಶದ ಕಲೆ-ಸಂಸ್ಕೃತಿಯನ್ನು ಉಳಿಸಿ, ಬೆಳೆಸೋಣ”
ನಿಪ್ಪಾಣಿ ನಗರದಲ್ಲಿ, ನವರಾತ್ರಿ ಹಬ್ಬದ ವಿಶೇಷವಾಗಿ ಬಸವಜ್ಯೋತಿ ಯೂಥ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ದಾಂಡಿಯ ಕಾರ್ಯಕ್ರಮ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿ, ಕೊರೋನಾ ಮಹಾಮಾರಿ ಆದಷ್ಟು ಬೇಗ ತೊಲಗಲಿ ಎಂದು ದುರ್ಗಾದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ದೇಶದಲ್ಲಿ ಒಂದೊಂದು ಪ್ರದೇಶಕ್ಕೆ ಅದರದ್ದೇ ಆದ ಸಂಸ್ಕೃತಿ, ಕಲಾ ವೈಭವವಿದೆ. ಅದರಲ್ಲಿ ಈ ದಾಂಡಿಯ ನೃತ್ಯವೂ ಹೌದು. ದಾಂಡಿಯಾ ಗುಜರಾತ್ನ ಸಾಂಪ್ರದಾಯಿಕ ಜಾನಪದ ನೃತ್ಯ ರೂಪ. ಇದು ಕೃಷ್ಣನಿಂದ ವೃಂದಾವನದಲ್ಲಿ ಹುಟ್ಟಿಕೊಂಡಿತು ಎಂದು ಹೇಳುತ್ತಾರೆ. ಇದು ನವರಾತ್ರಿ ಸಂಜೆಗಳ ವೈಶಿಷ್ಟ್ಯಪೂರ್ಣ ನೃತ್ಯವಾಗಿದೆ. ರಾತ್ರಿ ಎಂಟು ಗಂಟೆಯಿಂದ ಹತ್ತು ಗಂಟೆಯವರೆಗೆ ವಯಸ್ಸು ಮತ್ತು ಲಿಂಗಬೇಧವನ್ನ ಮರೆತು ಒಗ್ಗಟ್ಟು ಪ್ರದರ್ಶನದೊಂದಿಗೆ, ದಾಂಡಿಯಾ ನೃತ್ಯ ಮಾಡುತ್ತಾ ದೇವತೆಯ ಸ್ತುತಿ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಹಿಳಾ ಮೋರ್ಚಾ ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು, ಉಪಸ್ಥಿತರಿದ್ದರು..
ವರದಿ – ಮಹೇಶ ಶರ್ಮಾ