ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ. ಪತ್ರಕರ್ತರ ಹಲವು ಬೇಡಿಕೆ ಈಡೇರಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ.
ಯಲಬುರ್ಗಾ:ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯರು ಅಕ್ಟೋಬರ್( 16 ) ರಂದು ಯಲಬುರ್ಗಾ ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಲ್ಲಿ ಗಣಿ ಮತ್ತು ಭೂ ವಿಜ್ನಾನ ಇಲಾಖೆ ಹಾಗೂ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಮತ್ತು ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರನ್ನು ಭೇಟಿಯಾಗಿ ಜಿಲ್ಲೆಯ ಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ನಿವೇಶನ ಹಾಗೂ ಮೂಲಭೂತ ಸೌಕರ್ಯ ಮತ್ತು ಜಿಲ್ಲಾ ಹಾಗೂ ತಾಲೂಕ ಕೇಂದ್ರ ಗಳಲ್ಲಿ ಪತ್ರಿಕಾ ಭವನ ಮಾಡುವ ಕುರಿತು ಮನವಿ ಸಲ್ಲಿಸಲಾಯಿತು. ಪತ್ರಕರ್ತರ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಸಚಿವರು ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು. ನಂತರ ಮಾತನಾಡಿದ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಆರ್ ಶರಣಪ್ಪ ಗುಮಗೇರಾ ಮಾತನಾಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ನಿವೇಶನ ಹಾಗೂ ಮೂಲಭೂತ ಸೌಕರ್ಯ ಮಾಡಿಸಿ ಕೊಡಿಸುವ ದೃಷ್ಟಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಪತ್ರಕರ್ತರು ಆರ್ಥಿಕವಾಗಿ ಹಿಂದುಳಿದಿದ್ದು ಪತ್ರಕರ್ತರಿಗೆ ನಿವೇಶನ ಕೊಡುವ ರೀತಿಯಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕೆಂದರು. ಸಚಿವರು ಹಾಗೂ ಜಿಲ್ಲಾಡಳಿತ ಮುಂದಿನ ದಿನಮಾನಗಳಲ್ಲಿ ಪತ್ರಕರ್ತರ ಈ ಬೇಡಿಕೆಗಳಿಗೆ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಆರ್ ಶರಣಪ್ಪ ಗುಮಗೇರಾ , ಯಲಬುರ್ಗಾ ತಾಲೂಕು ಅಧ್ಯಕ್ಷರಾದ ಖಾಜಾವಾಲಿ ಜರಕುಂಟಿ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ಸಂಘದ ಸದಸ್ಯರಾದ ಶೇಖರ್ ಕನಸಾವಿ, ರಮೇಶ ಚೆಲುವಾದಿ ,ಗುರುಬಸಯ್ಯ, ಉಪಸ್ಥಿತರಿದ್ದರು.
ವರದಿ – ಸೋಮನಾಥ ಹೆಚ್ ಎಮ್