ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿ ಗಳಲ್ಲಿ ಮನವಿ….
ನಾಡು, ನುಡಿ, ನೆಲ ,ಜಲ ಭಾಷೆಗೆ ಧಕ್ಕೆಯಾದಾಗ ಹಾಗೂ ಈ ನೆಲದ ರೈತ-ಕಾರ್ಮಿಕ ಶೋಷಿತರ ಕನ್ನಡಿಗರ ಹಿತಕ್ಕೆ ಧಕ್ಕೆಯಾದಾಗ ಕರ್ನಾಟಕ ರಕ್ಷಣಾ ವೇದಿಕೆ ಪ್ರಾಮಾಣಿಕವಾಗಿ ನ್ಯಾಯಯುತ ಹೋರಾಟ ಮಾಡುತ್ತ ಬಂದಿದೆ ಕೆಲ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಆದರೆ ಕೆಲವು ಬಾರಿ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಮೊಕದ್ದೆಮೆಗಳು ಕೂಡ ದಾಖಲಾಗುತ್ತವೆ, ಪರಿಣಾಮವಾಗಿ ಹಲವಾರು ಹೋರಾಟಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿ ಮಾನಸಿಕ ವೇದನೆ ಅನುಭವಿಸುತ್ತಾ, ಕೋರ್ಟು, ಕಚೇರಿ ಎಂದು ಅಲೆಯುತ್ತಾ ತಮ್ಮ ಬದುಕನ್ನೇ ನಾಶ ಮಾಡಿಕೊಂಡಿದ್ದಾರೆ. ಆದಕಾರಣ ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಮೊಕದ್ದೆಮೆಗಳನ್ನು ಹಿಂಪಡೆಯಬೇಕು ಹಾಗೂ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿ ಗಳಲ್ಲಿ ನಾಡಿನ ಸಮಸ್ತ ಕನ್ನಡಪರ ಹೋರಾಟಗಾರರ ಪರವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ರವರು ಮನವಿ ಸಲ್ಲಿಸಿದರು.
ವರದಿ – ಮಹೇಶ ಶರ್ಮಾ