ಸಚಿವ ಎನ್.ನಾಗರಾಜು (ಎಂ.ಟಿ.ಬಿ) ಅವರಿಂದ ಜನ ಜಾಗೃತಿ ವಾಹನಕ್ಕೆ ಚಾಲನೆ…….
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಏರ್ಪಡಿಸಲಾದ “66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ವಲಯ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್ (ಎಂಟಿಬಿ) ಅವರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ಜನ ಜಾಗೃತಿ ವಾಹನಕ್ಕೆ ಚಾಲನೆ ನೀಡಿ, ಬಾಲಕಾರ್ಮಿಕ ಪದ್ಧತಿ ವಿರೋಧಿ ಕರಪತ್ರಗಳ ಬಿಡುಗಡೆಗೊಳಿಸಿದರು.ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್., ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನಾ ವಂಶಿಕೃಷ್ಣ , ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯ ಈ.ರವಿಕುಮಾರ್, ಕಾರ್ಮಿಕ ಅಧಿಕಾರಿ ಎಚ್.ಆರ್.ನಾಗೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕರಾದ ಸುಬ್ಬರಾವ್ ಎಸ್, ಸೇರಿದಂತೆ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು..