ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮತ್ತು ಲಭ್ಯತೆಯ ಬಗ್ಗೆ ಚರ್ಚೆ..
ಇಂದು ರಾಜ್ಯಧಾನಿಯಾದ ಬೆಂಗಳೂರು ವಿಧಾನಸೌಧದಲ್ಲಿ ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮತ್ತು ಲಭ್ಯತೆಯ ಬಗ್ಗೆ ಚರ್ಚೆ ನಡೆಸಲು.. ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್ ಶೆಟ್ಟರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಆಕ್ಸಿಜನ್ ಉತ್ಪಾದಕರು ಹಾಗೂ ಪೂರೈಕೆ ಸಂಸ್ಥೆಗಳ ಪ್ರತಿನಿಧಿಗಳು, ಸಂಸದ ತೇಜಸ್ವಿ ಸೂರ್ಯ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಡಾ ರಾಜ್ ಕುಮಾರ್ ಖತ್ರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾವೇದ್ ಅಖ್ತರ್, ಕೈಗಾರಿಕಾ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ವರದಿ – ಹರೀಶ ಶೇಟ್ಟಿ ಬೆಂಗಳೂರು