ತಾವರಗೇರಾ ನ್ಯೂಸ್ ಪತ್ರಿಕೆ & ವೆಬ್ ಬಳಗದವತಿಯಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು….
ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.
ಹಿಂದೂ ಧರ್ಮ ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ. ಬಲಿ–ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿ ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ–ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ. ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದಿ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. ದೇಶಾದ್ಯಂತ ಸಡಗರದಿಂದ ದೀಪಾವಳಿಯನ್ನು ಇವತ್ತು ನಾವು ಆಚರಿಸುತ್ತಿದ್ದೇವೆ ಹೋದ ವರ್ಷ ಕರೋನಾ ಮಹಾಮಾರಿಯ ಆತಂಕದಲ್ಲಿ ಆಚರಿಸಿದ್ದು ,ಈ ಬಾರಿ ಭಗವಂತನ ಆಶೀರ್ವಾದದಿಂದ ಅಂತಹ ತೊಂದರೆ ಇಲ್ಲ ಮತ್ತು ರೈತರ ಮೊಗದಲ್ಲಿ ಕೂಡ ಸಂತೋಷ ಮನೆಮಾಡಿದೆ ಕೆಲವೆಡೆ ಹೊರತುಪಡಿಸಿದರೆ ಬಹುತೇಕ ಕಡೆ ಬೆಳೆಗಳು ಕೂಡ ಚೆನ್ನಾಗಿ ಬಂದಿದೆ ಸರಕಾರ ರೈತರ ಬೆಳೆಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವ ಮೂಲಕ ರೈತರ ಹಿತ ಕಾಪಾಡಬೇಕು, ದೀಪಾವಳಿ ಹಬ್ಬ ಎಲ್ಲರಿಗೂ ಶುಭ ನೀಡಲಿ, ಎಲ್ಲರ ಬದುಕು ಹಸನವಾಗಲಿ, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ತಾವರಗೇರಾ ನ್ಯೂಸ್ ಪತ್ರಿಕೆ ಬಳಗ ಹಾಗೂ ವೆಬ್ ಬಳಗದವತಿಯಿಂದ.
ವರದಿ – ಸಂಪಾದಕೀಯ