ಚಿಕ್ಕೋಡಿ ಬಿಜೆಪಿ ಗೆಲ್ಲಿಸೋಣ, ಅಬಿವೃದ್ಧಿಯತ್ತ ಮುನ್ನಡೆಯೋಣ…..
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಿಕ್ಕೋಡಿಯಲ್ಲಿ, ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿದ್ದ ‘ಜನಸ್ವರಾಜ್’ ಸಮಾವೇಶದಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಜನಪರ ಕಾರ್ಯಗಳಿಗಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀ ಮಹಾಂತೇಶ ಕವಟಗಿಮಠ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮತದಾರರಲ್ಲಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬಿ. ಶ್ರೀರಾಮುಲು ಜಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಜಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್. ರವಿಕುಮಾರ್ ಜಿ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಕೆ. ಎಸ್. ನವೀನ್ ಜಿ, ರಾಜ್ಯಸಭೆ ಸದಸ್ಯರಾದ ಶ್ರೀ ಈರಣ್ಣ ಕಡಾಡಿ ಜಿ, ಬಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ರಮೇಶ ಕತ್ತಿ ಜಿ, ಶಾಸಕರು, ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು, ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ – ಮಹೇಶ ಶರ್ಮಾ