ಎಸ್ ಎಫ್ಐನಿಂದ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಕೈಯಲ್ಲಿ ಮೊಟ್ಟೆ ಹಿಡಿದು ಪ್ರತಿಭಟನೆ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ವಿರೋಧ ಮಾಡುತ್ತಿರು ಸ್ವಾಮಿಜಿಗಳ ಹೇಳಿಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಸ್ವಾಮೀಜಿಗಳ ವಿರೋಧಕ್ಕೆ ಸರ್ಕಾರ ಮಣಿಯದಿರಲಿ ಎಸ್ಎಫ್ಐ ರಾಜ್ಯದಲ್ಲಿ ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಕಲ್ಯಾಣ ಕರ್ನಾಟಕದ ಕೊಪ್ಪಳ, ಬೀದರ್, ಯಾದಗಿರಿ, ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು ಸೇರಿದಂತೆ ಬಿಜಾಪುರ ಜಿಲ್ಲೆಯಲ್ಲಿ 1 ರಿಂದ 8ನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಅಪೌಷ್ಠಿಕತೆ ಮತ್ತು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಪೌಷ್ಠಿಕತೆ ನಿವಾರಣೆಗಾಗಿ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೇಹಣ್ಣು ವಿತರಣೆ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಲಿಂಗಸ್ಗೂರು ತಾಲೂಕು ಸಮಿತಿ ಸ್ವಾಗತಿಸುತ್ತದೆ. ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೇಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಮಠದ ಸ್ವಾಮೀಜಿಗಳು ಜಾತಿ ಮತ್ತು ಧಾರ್ಮೀಕತೆ, ನಂಬಿಕೆಯ ಹೆಸರಿನಲ್ಲಿ ಸರ್ಕಾರದ ಆದೇಶವನ್ನು ವಾಪಸ್ಸು ಪಡೆಯಬೇಕೆಂದು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿರುವುದು ಸರಿಯಲ್ಲ, ಮೊಟ್ಟೆಯನ್ನು ತಿನ್ನುವುದು ಹಾಗೂ ತಿನ್ನದಿರುವುದನ್ನು ಮಕ್ಕಳ ಆಯ್ಕೆಯಾಗಿರುತ್ತದೆ ಇದನ್ನೇ ತಿನ್ನಬೇಕು, ಇದನ್ನೇ ತಿನ್ನಬಾರದೆಂದು ಆಹಾರದ ಹಕ್ಕಿನ ಮೇಲೆ ಸ್ವಾಮೀಜಿಗಳು ದಾಳಿ ಮಾಡುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಸಂಘಟನೆಯು ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಅತೀ ಹಿಂದುಳಿದ ಪ್ರದೇಶವಾದ ಹೈದ್ರಾಬಾದ್ ಕರ್ನಾಟಕದ ಈಗೀನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಕ್ಕಳ ಅಪೌಷ್ಠಿಕತೆಯ ಪ್ರಮಾಣ ಯಾದಗಿರಿ- ಶೇ. 74, ಕಲಬುರಗಿ- ಶೇ. 72.4, ಬಳ್ಳಾರಿ- ಶೇ. 72.3, ಕೊಪ್ಪಳ- ಶೇ. 70.7, ರಾಯಚೂರು- ಶೇ. 70.6, ಬೀದರ್- ಶೇ. 69.1, ಬಿಜಾಪುರ- ಶೇ. 68ರಷ್ಟು ಈ ರೀತಿಯಲ್ಲಿದೆ, ಈ ಸಮಸ್ಯೆ ನಿವಾರಣೆಗೆ ಸ್ವಾಮೀಜಿಗಳು ಶ್ರಮವಹಿಸಲಿ ಅದನ್ನು ಬಿಟ್ಟು ಜಾತಿ, ಧರ್ಮದ ಹೆಸರಿನಲ್ಲಿ, ಸಮಾಜದಲ್ಲಿ ಅಶಾಂತಿಯನ್ನು ಸೃಷ್ಠಿ ಮಾಡುವ ಸ್ವಾಮೀಜಿಗಳ ಕ್ಷುಲ್ಲಕ ಮನಸ್ಥಿತಿಯನ್ನು ಎಸ್‌ಎಫ್‌ಐ ಸಂಘಟನೆ ವಿರೋಧಿಸುತ್ತದೆ. ಅಲ್ಲದೇ, ಮೊಟ್ಟೆ ಮತ್ತು ಬಾಳೇಹಣ್ಣು ವಿತರಣೆ ನಂತರ ಇದೇ ತಿಂಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಶೇ.10 ರಿಂದ 12ರಷ್ಟು ಏರಿಕೆ ಕಂಡುಬಂದಿದೆ. 80ರಷ್ಟು ಮಕ್ಕಳು ಮೊಟ್ಟೆ ಬೇಕೆಂದು ಬೇಡಿಕೆ ಇಟ್ಟಿದ್ದಾರೆ ಸುಮಾರು 14,44,000 ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಮೊಟ್ಟೆ ಸಹಾಯವಾಗಲಿದೆ ಶೇಕಡ 20ರಷ್ಟು ಮಕ್ಕಳಿಗೆ ಬಾಳೇಹಣ್ಣು ವಿತರಣೆ ಮಾಡುವುದರಿಂದ ಯಾವುದೇ ವಿದ್ಯಾರ್ಥಿಗಳಿಗೆ ಬೇಧಭಾವ ತಾರತಮ್ಯ ಮಾಡುವ ಅವಕಾಶವಿರುವುದಿಲ್ಲ ಇದನ್ನು ಸ್ವಾಮೀಜಿಗಳು ಅರ್ಥ ಮಾಡಿಕೊಳ್ಳಲಿ, ಅಲ್ಲದೇ, ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ವಿವಿಧ ಜಾತಿ-ಧರ್ಮದ ತುಳಿತಕ್ಕೆ ಒಳಗಾದ ಸಮುದಾಯದ, ಬಡವರ, ಹಿಂದುಳಿದ ವರ್ಗ ಸಮುದಾಯದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೂ ಅಪೌಷ್ಠಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೇಹಣ್ಣನ್ನು ವಿತರಣೆ ಮಾಡಲು ಸರ್ಕಾರ ಮುಂದಾಗಬೇಕೆಂದು ಎಸ್‌ಎಫ್‌ಐ ರಾಜ್ಯ ಸರಕಾರವನ್ನು ಒತ್ತಾಯ ಮಾಡುತ್ತದೆ. ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಹಾಗೂ ಗ್ರಾಪಂ ಸದಸ್ಯ ರಮೇಶ ವೀರಾಪೂರು, ತಾಲೂಕಾಧ್ಯಕ್ಷ ತಿಪ್ಪಣ್ಣ ನಿಲೋಗಲ್, ಬಿಸಿಯೂಟ ನೌಕರರ ಸಂಘದ ಗೌರವಾಧ್ಯಕ್ಷ ಮಹ್ಮದ್ ಹನೀಫ್, ಎಸ್ಎಫ್ಐ ಮುಖಂಡರಾದ ಪ್ರಹ್ಲಾದ್ ಕೋಠಾ, ನಾಗರಾಜ್ ಕೋಠಾ, ಮುದ್ದೇಶ, ರಹೀಂ, ರಾಮನಗೌಡ, ವೀರಭದ್ರ, ಚಂದ್ರಶೇಖರ, ಶರಣಗೌಡ, ಅಪ್ಪಾಜಿ, ರವಿಕುಮಾರ್, ವೀರೇಶ, ಅಮರೇಶ, ಕಾಳಿಂಗ, ಸಂತೋಷ, ಅಜಯ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ – ಸಂಪಾದಕೀಯ