ಶೀಘ್ರದಲ್ಲೇ ರಾಯಚೂರು ವಿಮಾನ ನಿಲ್ದಾಣ ಘೋಷಣೆ–ಕೆ.ಶಿವನಗೌಡ ನಾಯಕ…..
ಕೆಲವೇ ದಿನಗಳಲ್ಲಿ ಬಹು ವರ್ಷಗಳ ಬೇಡಿಕೆ ಸಾಕಾರ • ಕೊಟ್ಟ ಮಾತಿನಂತೆ ಮಂಜೂರು ಮಾಡಿಸುವುದು ನನ್ನ ಜವಾಬ್ದಾರಿ ರಾಯಚೂರು: ಜಿಲ್ಲೆಯ ಬಹುಬೇಡಿಕೆ ಹಾಗೂ ಕಳೆದ ಎರಡು ದಶಕದ ಕನಸಾದ ರಾಯಚೂರು ವಿಮಾನ ನಿಲ್ದಾಣದ ಸಿದ್ಧತೆಗಳು ಅಂತಿಮ ರೂಪಕ್ಕೆ ಬಂದಿದ್ದು ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಘೋಷಣೆಯಾಗಲಿದೆ ಎಂದು ಶಾಸಕ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕೇಂದ್ರದಲ್ಲಿ ವಿಮಾನ ನಿಲ್ದಾಣ ಆಗಬೇಕು ಎಂದು ಮೊದಲಿನಿಂದಲೂ ಪ್ರಯತ್ನ ಮಾಡಲಾಗುತ್ತಿತ್ತು. ಇದರ ಭಾಗವಾಗಿ ಸ್ಥಳ ಪರಿಶೀಲನೆ, ಕೇಂದ್ರ ಸರ್ಕಾರ ಹಾಗೂ ನಾಗರಿಕ ವಿಮಾನಯಾನ ಇಲಾಖೆಯಿಂದ ಅನುಮೋದನೆ ದೊರೆತಿದ್ದು ಎಲ್ಲಾ ಪೂರ್ವ ತಯಾರಿ ಮಾಡಲಾಗಿದೆ. ಈ ಹಿಂದೆ ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆಯ ಕುರಿತು ತಾವು ಭರವಸೆ ನೀಡಲಾಗಿತ್ತು. ಇದೀಗ ಅದನ್ನು ಅನುಷ್ಠಾನಕ್ಕೆ ತರುವಂತೆ ಮಾಡುವುದು ನನ್ನ ಜವಾಬ್ದಾರಿ. ಕೊಟ್ಟ ಮಾತಿನಂತೆ ಜಿಲ್ಲಾ ಕೇಂದ್ರ ವಿಮಾನ ನಿಲ್ದಾಣ ಘೋಷಣೆ ಮಾಡಿಸುತ್ತೇನೆ. ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ. ರಾಯಚೂರು ವಿಮಾನ ನಿಲ್ದಾಣ ಮಂಜೂರಾಗಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಸಹಾಯ, ಸಹಕಾರ ಮಾಡಿದ್ದಾರೆ. ಅವರೆಲ್ಲರ ಬೆಂಬಲದಿಂದ ಆದಷ್ಟು ಬೇಗ ಜಿಲ್ಲೆಗೆ ವಿಮಾನ ನಿಲ್ದಾಣ ಘೋಷಣೆಯಾಗಲಿದೆ. ಈ ಕುರಿತು ಸಚಿವರಾದ ವಿ.ಸೋಮಣ್ಣ ಅವರೊಂದಿಗೂ ಚರ್ಚಿಸಲಾಗಿದೆ. ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸೇರಿ 46 ಕೋ. ರೂ. ಅನುದಾನವನ್ನು ವಿಮಾನ ನಿಲ್ದಾಣ ಕಾಮಗಾರಿಗೆ ನೀಡಲಾಗಿದೆ. ಶೀಘ್ರದಲ್ಲೇ ಅಧಿಕೃತವಾಗಿ ಸರ್ಕಾರದಿಂದ ರಾಯಚೂರು ಜಿಲ್ಲೆಗೆ ವಿಮಾನ ನಿಲ್ದಾಣ ಘೋಷಣೆಯಾಗಲಿದೆ.ಜಿಲ್ಲೆಯ ಸಮಗ್ರ ಅಭಿವೃದ್ಧಿ ನಮ್ಮ ಗುರಿಯಾಗಿದ್ದು ಅದಕ್ಕೆ ಪೂರಕವಾಗಿ ಕೆಲಸ ಮಾಡಲಾಗುತ್ತಿದೆ. ಕಳೆದ ಏಳು ದಶಕಗಳ ಅವಧಿಯಲ್ಲಿ ಜಿಲ್ಲೆಯನ್ನು ಕಡೆಗಣಿಸಲಾಗಿತ್ತು. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವರದಿ – ಸಂಪಾದಕೀಯ