ಸಂವಿಧಾನ ಶಿಲ್ಪಿ ಡಾ .ಬಿ.ಆರ್.ಅಂಬೇಡ್ಕರ್ ರವರಿಗೆ ಜಿಲ್ಲಾ ನ್ಯಾಯಾಧೀಶರೊಬ್ಬರಿಂದಲೇ ಅಪಮಾನ – ಸಿಪಿಐಎಂ ಖಂಡನೆ…….

Spread the love

ಸಂವಿಧಾನ ಶಿಲ್ಪಿ ಡಾ .ಬಿ.ಆರ್.ಅಂಬೇಡ್ಕರ್ ರವರಿಗೆ ಜಿಲ್ಲಾ ನ್ಯಾಯಾಧೀಶರೊಬ್ಬರಿಂದಲೇ ಅಪಮಾನಸಿಪಿಐಎಂ ಖಂಡನೆ…….

ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಅಲ್ಲಿ ಮಹಾತ್ಮ ಗಾಂಧೀಜಿ ಚಿತ್ರಪಟದ ಜೊತೆ ಇಡಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಚಿತ್ರಪಟವನ್ನು ತೆಗೆದರೆ ಮಾತ್ರ ಧ್ವಜಾರೋಹಣ ಮಾಡುವೆನೆಂದು ಸಂವಿಧಾನ ಶಿಲ್ಪಿಗೆ ಮತ್ತು ಆ ಮೂಲಕ ಭಾರತದ ಸಂವಿಧಾನಕ್ಕೆ ಅಪಮಾನ ಎಸಗಿದ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ ಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ) ತಾಲೂಕು ಸಮಿತಿ ಲಿಂಗಸ್ಗೂರು ಬಲವಾಗಿ ಖಂಡಿಸುತ್ತದೆ. ಗಣರಾಜ್ಯೋತ್ಸವದ ದಿನವೇ ಸಂವಿಧಾನ ಶಿಲ್ಪಿಗೆ, ಅದು ಕೂಡಾ ನ್ಯಾಯಾಧೀಶರೊಬ್ಬರಿಂದ ಆಗಿರುವ ಅಪಮಾನವು ಅಕ್ಷಮ್ಯವಾಗಿದ್ದು, ಈ ಕುರಿತು ಅಗತ್ಯ ಕ್ರಮವಹಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಗಳನ್ನು ಸಿಪಿಐಎಂ ಒತ್ತಾಯಿಸುತ್ತದೆ. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ರು  ಅಂಬೇಡ್ಕರ್ ಫೋಟೋವನ್ನು ತೆಗೆಸುವ ಮೂಲಕ ಹಾಲಿ ಇರುವ ಸರ್ಕಾರೀ ನಿಯಮಗಳಿಗೆ, ಆದೇಶಗಳಿಗೆ ಮತ್ತು ರಾಷ್ಟ್ರ ಲಾಂಛನಗಳಿಗೆ ಗೌರವ ತೋರಬೇಕೆಂಬ ನಿಯಮಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ . ಕಾನೂನಿಗಿಂತ ತನ್ನ ವೈಯಕ್ತಿಕ ಪೂರ್ವಗ್ರಹಗಳನ್ನು ಆಚರಿಸಿದ್ದಾರೆ . ಹಾಗೂ ಸಂವಿಧಾನವನ್ನು ಮೌಲ್ಯಗಳನ್ನು ಎತ್ತಿಹಿಡಿಯುತ್ತೇನೆಂಬ ಪ್ರತಿಜ್ಞೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ‌. ಆದ್ದರಿಂದ ರಾಯಚೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ನ್ನು ಸೇವೆಯಿಂದ  ವಜಾ ಮಾಡಬೇಕು ಮತ್ತು ಕಾನೂನು ಉಲ್ಲಂಘನೆಯ ಕಲಮುಗಳನ್ವಯ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *