ವಿಜಯನಗರದಲ್ಲಿ ಅಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಕೆಡಿಪಿ ಸಭೆ..
ವಿಜಯನಗರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಮೊದಲ ನಡೆಸಿದರು. ಇಂದಿನ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಶೇ 50ರಷ್ಟು ಸಮಾಧಾನವಿದೆ. ಹಲವು ಅಧಿಕಾರಿಗಳಿಗೆ ಮಾಹಿತಿ ಕೊರತೆ ಇದೆ. ವರದಿ ಪ್ರಸ್ತುತಪಡಿಸುವ ವಿಧಾನವೂ ಗೊತ್ತಿಲ್ಲ. ಅಧಿಕಾರಿಗಳು ಮೈಗಳ್ಳತನ ಮಾಡತಕ್ಕದ್ದಲ್ಲ ಎಂದು ಎಚ್ಚರಿಕೆ ನೀಡಿದರು. ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಇರುವ ಹಲವಾರು ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ ರೈತರಿಗೆ ಅನುಕೂಲ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿವರವಾಗಿ ಚರ್ಚಿಸಿದ್ದೇನೆ. ಜಿಲ್ಲೆಯ 4 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿರುವ ಮಾಹಿತಿ ಸಿಕ್ಕ ತಕ್ಷಣ ನಮ್ಮ ಜಿಲ್ಲಾಡಳಿತ ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರನ್ನು ಸುರಕ್ಷಿತ ಸ್ಥಳ ತಲುಪಲು ನೆರವಾಗುವಂತೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಅದಕ್ಕಾಗಿ ಜಿಲ್ಲಾಡಳಿತಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದೇ ವೇಳೆ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಕರಕುಶಲ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದು, ಅದನ್ನು ಸ್ವೀಕರಿಸಿ, ಅವರ ಕಲೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಭೆಯಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಜರಿದ್ದರು.
ವರದಿ – ಮಹೇಶ ಶರ್ಮಾ ಅಥಣಿ