ತಾವರಗೇರಾ ಪಟ್ಟಣದಲ್ಲಿಂದು 88.66 ಲಕ್ಷ ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಅದ್ದೂರಿ ಸಮಾರಂಭ,
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿಂದು 88.66 ಲಕ್ಷ ಕೋಟಿ ವೆಚ್ಚದ ತುರ್ವಿಹಾಳ ಹತ್ತಿರವಿರುವ ತುಂಗಭದ್ರಾ ಎಡದಂಡೆ ಕಾಲುವೆ ಮೂಲದಿಂದ ನೀರು ಸರಬುರಾಜು ಯೋಜನೆಗೆ ಇಂದು ಸಚಿವರ ದಂಡೇ ಆಗಮಿಸಿದ್ದು, ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ) ಕರಡಿ ಸಂಗಣ್ಣನವರು ಆಗಮಿಸಿದ್ದು, ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅಧ್ಯಕ್ಷತೆ ವಹಿಸಿದ್ದು, ಕಾರ್ಯಕ್ರಮದಲ್ಲಿ ಲೋಕಸಭೆ ಸದಸ್ಯರು ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಹಾಗೂ ಪಟ್ಟಣ ಪಂಚಾಯ ತಾವರಗೇರಾ ಇವರ ಸಹಯೋಗದಲ್ಲಿ 88.16 ಕೋಟ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿತು. ಒಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸೇರಿ ಈ ಶಂಕುಸ್ಥಾಪನೆ ಕಾರ್ಯಕ್ರಮವು ಅಧ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮದ ಜೊತೆ ಜೊತೆಗೆ ಪಟ್ಟಣದ ಹಲವು ಸರ್ಕಲ್ ನಲ್ಲಿ ಕಾರ್ಯಕರ್ತರು ಹಾಗೂ ಹೋರಾಟಗಾರರು ಸೇರಿ ಸನ್ಮಾನದ ಜೊತೆಗೆ ಕೆಲವು ಬೇಡಿಕೆಗಳನ್ನು ಇಟ್ಟುಕೊಂಡು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ವರದಿ – ಸಂಪಾದಕೀಯ