ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

Spread the love

ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ಸಿರುಗುಪ್ಪ : ನಗರದ ನೇತಾಜಿ ವ್ಯಾಯಾಮ ಶಾಲೆಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ,  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶಿಶು ಅಭಿವೃದ್ದಿ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಶಾಸಕ ಎಂ.ಎಸ್.ಸೋಮಲಿ0ಗಪ್ಪ ಅವರು ನಂತರ ಅವರು ನಮ್ಮ ದೇಶದಲ್ಲಿ ಮಹಿಳೆಯರು ಶೈಕ್ಷಣಿಕ, ವೈದ್ಯಕೀಯ, ಚಲನಚಿತ್ರೋದ್ಯಮ, ವಾಣಿಜ್ಯ, ರಕ್ಷಣೆ, ಎಲ್ಲಾ ರಂಗಗಳಲ್ಲೂ ಪುರಷರಷ್ಟೇ ಸಮಾನವಾಗಿ ಕಾರ್ಯನಿರ್ವಹಿಸುತ್ತಾ ಉತ್ತಮ ಜೀವನದ ದಾರಿದೀಪವಾಗಿದ್ದಾರೆ. ಸನಾತನ ಕಾಲದಿಂದಲೂ ನಮ್ಮ ವೇದ ಪುರಾಣಗಳಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದ್ದು, ಶಿವಶರಣೆಯರಾದ ಅಕ್ಕಮಹಾದೇವಿ, ಹೇಮರೆಡ್ಡಿ ಮಲ್ಲಮ್ಮ, ಸಾವಿತ್ರಿ ಬಾಪುಲೆಯಂತಹ ಸಮಾಜದಲ್ಲಿನ ಅನಿಷ್ಟತೆಯನ್ನು ಹೋಗಲಾಡಿಸಲೆತ್ನಿಸಿದ್ದಾರೆ. ವೀರವನಿತೆಯರಾದ ಬೆಳವಡಿ ಮಲ್ಲಮ್ಮ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ರಾಣಿ ಅಬ್ಬಕ್ಕರಂತಹ ಮಹಿಳೆಯರು ದೇಶದ ರಕ್ಷಣೆಗಾಗಿ ತೊಟ್ಟಿಲು ತೂಗುವ ಕೈಯಲ್ಲಿ ಖಡ್ಗವನ್ನು ಹಿಡಿದಿದ್ದು, ಈಗಲೂ ದೇಶದ ರಕ್ಷಣಾ ವ್ಯವಸ್ಥೆಯಲ್ಲೂ ಮಹಿಳಾ ಸೈನಿಕರು ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮಾಜದ ಸೇವೆಗೆ ಮುಂದಾಳತ್ವ ವಹಿಸಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಬೇಡಿಕೆಗಳಿಗೆ ಬಜೆಟ್‌ನಲ್ಲಿ ವೇತನವನ್ನು ಹೆಚ್ಚಿಸಿದ್ದಾರೆ. ಮಹಿಳೆಯರು ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳ ವಿವರವನ್ನು ನಿಮ್ಮ ಅಂಗನವಾಡಿ ಕೇಂದ್ರ ವ್ಯಾಪ್ತಿಯ ಮಹಿಳೆಯರಿಗೆ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಆರ್ಥಿಕ ಸಬಲೀಕರಣವಾಗುವಂತೆ ಜಾಗೃತಿ ಮೂಡಿಸಬೇಕೆಂದು ಮಹಿಳೆಯರಿಗಾಗಿ ಉತ್ತಮ ವೇದಿಕೆ ನಿರ್ಮಿಸಿಕೊಟ್ಟ ಸಿ.ಡಿ.ಪಿ.ಓ ಎ.ಜಲಾಲಪ್ಪ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.  ಕಾರ್ಯಕ್ರಮದಲ್ಲಿ ಶ್ರೀ ಶಕ್ತಿ ಗುಂಪುಗಳ ತಯಾರಿಸಿದ ಪೌಷ್ಟಿಕ ಪದಾರ್ಥಗಳ ಮತ್ತು ವಸ್ತುಗಳ ಪ್ರದರ್ಶನಕ್ಕಿಡಲಾಗಿತ್ತು. ಅತ್ಯುತ್ಯಮ ಅಂಗನವಾಡಿ ಶಿಕ್ಷಕಿಯರಿಗೆ, ಉತ್ತಮ ಆಹಾರ ಪದಾರ್ಥಗಳ ತಯಾರಿಸಿದ ಬಿಸಿಯೂಟ ನೌಕರರಿಗೆ, ಇಲಾಖೆಯಿಂದ ನಿವೃತ್ತಿ ಪಡೆದ ಹಿರಿಯ ಸಿಬ್ಬಂದಿಗಳಿಗೆ, ನಗರದ ಸ್ವಚ್ಛತೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೌರ ಕಾರ್ಮಿಕ ಸಿಬ್ಬಂದಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ  ಉತ್ತಮ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ, ತಾ.ಪಂ.ಕಾರ್ಯನಿರ್ವಾಹಕ ಶಿವಪ್ಪ ಸುಬೇದಾರ್, ಸಿ.ಡಿ.ಪಿ.ಓ ಎ.ಜಲಾಲಪ್ಪ, ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ ವೆಂಕಟರಾಮರೆಡ್ಡಿ, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಗಾದಿಲಿಂಗಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ವಿಜಯ ರಂಗಾರೆಡ್ಡಿ, ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷೆ ಡಾ.ಗಂಗಮ್ಮ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶಿಶು ಅಭಿವೃದ್ದಿ ಯೋಜನಾ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಸಹಾಯಕಿಯರು,  ಶ್ರೀ ಶಕ್ತಿ ಸಿಗುಂಪುಗಳ, ಒಕ್ಕೂಟಗಳ ಸದಸ್ಯೆಯರು ಇದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *