ಮುದೇನೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊವಿಡ್ ಮಾರ್ಗ ಸೂಚಿಯಂತೆ SSLC ಪರಿಕ್ಷೇ ಬರೆದ ವಿದ್ಯಾರ್ಥಿಗಳು..
ಕುಷ್ಟಗಿ ತಾಲೂಕಿನ ಮುದೇನೂರುಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಉತ್ಸಾಹದಿಂದ ವಿದ್ಯಾರ್ಥಿಗಳು ಬಂದು ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾದ ಮಕ್ಕಳು ಒಟ್ಟು ಮಕ್ಕಳ ಸಂಖ್ಯೆ 254 ಗಂಡು 141 ಹೆಣ್ಣು 113 ಒಂದು ವಿದ್ಯಾರ್ಥಿ ಗೈರು
ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಕಲ ತಯಾರಿಯನ್ನು ಮಾಡಿಕೊಳ್ಳಲಾಗಿದೆ. ಹಾಗೂ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶ ದ್ವಾರದಲ್ಲೇ ಸ್ಯಾನಿಟೈಜರ್ ಬಳಸಲು ವ್ಯವಸ್ಥೆ ಮಾಡಲಾಗಿದೆ. ಕೊರೊನಾದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಾಗೂ ಕೆಲ ಕಡೆ ಮಾಸ್ಕ್ ಇಲ್ಲದ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಲಾಗುತ್ತಿದ ನೋಡಲ್ ಅಧಿಕಾರದ ಸೋಮನಗೌಡ ಪಾಟೀಲ್ ತಿಳಿಸಿದರು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಪರೀಕ್ಷಾ ದಿನಗಳಂದು ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಮತ್ತು ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹಲವಾರು ಮಾರ್ಪಾಡುಗಳಾಗುತಿದ್ದು ಎಸ್.ಓ.ಪಿ ಗಳನ್ನು ಸರಿಯಾಗಿ ಪಾಲಿಸಬೇಕಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಸಹಾಯಕರು/ಆಶಾ ಕಾರ್ಯಕರ್ತೆಯರನ್ನು (ಅಗತ್ಯ ಔಷಧಗಳೊಂದಿಗೆ) ನಿಯೋಜಿಸಲಾಗುವುದು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳು ಇದ್ದರೆ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿಯಂತೆ ಎಸೆಸೆಲ್ಸಿ ಪರೀಕ್ಷೆ ನಡೆಯಿತು.
ವರದಿ-ಚಂದ್ರುಶೇಖರ ಕುಂಬಾರ್ ಮುದೇನೂರು.