ಆರೋಗ್ಯ ಅಮೃತ ಅಭಿಯಾನ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಶ್ರೀಕಂಠಾಪುರ ತಾಂಡ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಸಹಯೋಗ ದೊಂದಿಗೆ ಆರೋಗ್ಯ ಅಮೃತ ಅಭಿಯಾನ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಸದಸ್ಯರಾದ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ಕೂಡ್ಲಿಗಿ ಘಟಕದ ಅಧ್ಯಕ್ಷರಾದ ಕೆ.ಮುರುಳಿರಾಜ್ ರವರು ಇಂತಹ ಉಚಿತ ಶಿಬಿರದಲ್ಲಿ ಭಾಗವಹಿಸಿ ಗ್ರಾಮದ ಎಲ್ಲಾ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಲಿತಮ್ಮ ಗೋವಿಂದಪ್ಪ , ಉಪಾಧ್ಯಕ್ಷರಾದ ವೈ. ಬೋರಯ್ಯ , ಗ್ರಾಮ ಪಂಚಾಯಿತಿ ಸರ್ವ ಸದಸ್ಯರು,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಎಸ್ ಡಿ ಎಂ ಸಿ ಅದ್ಯಕ್ಷರು, ಊರಿನ ಗ್ರಾಮಸ್ಥರು, ಯುವಕರು, ಆಸ್ಪತ್ರೆ ಸಿಬ್ಬಂದಿ ವರ್ಗ , ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ಶಿಕ್ಷಣ ಇಲಾಖೆ ಮುಖ್ಯ ಗುರುಗಳು ಸಹ ಶಿಕ್ಷಕರು ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.
ವರದಿ – ✍ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ-9008937428