ರಸ್ತೆ ಅಭಿವೃದ್ಧಿಗಾಗಿ 50 ಕೋ. ರೂ.ಅನುದಾನ ಬಿಡುಗಡೆ ವಿವಿಧ ಗ್ರಾಮಸ್ಥರ ಜೊತೆ ಶಾಸಕ ಕೆ.ಶಿವನಗೌಡ ನಾಯಕ ಚರ್ಚೆ, ವೀಕ್ಷಣೆ..
ರಾಯಚೂರು: ದೇವದುರ್ಗ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು 50 ಕೋ. ರೂ. ಅನುದಾನ ಬಿಡುಗಡೆ ಮಾಡಿದ್ದು ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ ತಿಳಿಸಿದರು. ತಾಲೂಕಿನ ಕುರ್ಕಿಹಳ್ಳಿ, ಯಾಟಗಲ್, ಹೆರೂರು, ಸಲಿಕ್ಯಾಪುರ, ಚಿಕ್ಕಬುದೂರು, ಯರಮಸಾಳ, ನಗರಗುಂಡ, ದೊಂಡಂಬಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರ ಜೊತೆ ಚರ್ಚಿಸಿ ರಸ್ತೆಗಳನ್ನು ವೀಕ್ಷಣೆ ಮಾಡಿದರು. ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಗತ್ಯ ಹಿನ್ನೆಲೆಯಲ್ಲಿ ವಿಶೇಷ ಕಾಳಜಿ ವಹಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ರಸ್ತೆ ಅಭಿವೃದ್ಧಿಗಾಗಿ 50 ಕೋ. ರೂ. ಅನುದಾನ ಬಿಡುಗಡೆ ಮಾಡಿಸಲಾಗಿದೆ. ಆದಷ್ಟು ಬೇಗ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗ್ರಾಮಸ್ಥರು ಮುತುರ್ವಜಿ ವಹಿಸಿ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಲಿಂಗನಗೌಡ ಜೋಳದಹೆಡಗಿ, ಬಿಜೆಪಿ ಮುಖಂಡರಾದ ಬಸಯ್ಯ ತಾತ ಯರಮಸಾಳ, ರವಿ ಗೌಡ ಮಾತ್ಪಳ್ಳಿ, ಬಸವರಾಜ ಅಕ್ಕರಕಿ, ಲೋಕೋಪಯೋಗಿ ಇಲಾಖೆಯ ಎಇಇ ನುಸ್ರತ್ ಅಲಿ, ಜೆಇ ಬನಪ್ಪ, ನೊಬೇಲ್ ಸಿವಿಲ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಎಂಡಿ ನಾಗರಾಜ ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ – ಸಂಪಾದಕೀಯ