ಬರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಆಗ್ರಹಿಸಿ ಅಂಚೆ ಪತ್ರ ಚಳುವಳಿ..

Spread the love

ಬರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಆಗ್ರಹಿಸಿ ಅಂಚೆ ಪತ್ರ ಚಳುವಳಿ..

ಮೈಸೂರು: ಬರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಯಂತ್ರಗಳ ಬಳಕೆಯನ್ನು ನಿಷೇಧಿಸಿ, ಮತಪತ್ರಗಳನ್ನು ಬಳಸಬೇಕು ಎಂದು ಒತ್ತಾಯಿಸಿಮಂಗಳವಾರ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಅಂಚೆ ಪತ್ರ ಚಳವಳಿ ನಡೆಸಿದವು. ನಗರಪಾಲಿಕೆಯ ಕಚೇರಿ ಮುಂಭಾಗವಿರುವ ಅಂಚೆ ಡಬ್ಬದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ನಾನಾ ಘೋಷಣೆಗಳನ್ನು ಕೂಗಿದರು. ಬಳಿಕ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಬರೆದಿದ್ದ ಪೋಸ್ಟ್ ಕಾರ್ಡ್ಗಳನ್ನು ಡಬ್ಬಿಗೆ ಹಾಕಿದರು. ಇತ್ತೀಚೆಗೆ ಲಕ್ಷಾಂತರ ಇವಿಎಂ ಯಂತ್ರಗಳು ಕಾಣೆಯಾಗಿರುವ ವಿಚಾರ ರಾಜಸಭೆಯಲ್ಲಿ ಪ್ರಸ್ತಾಪವಾಗಿದೆ. ದೇಶದ್ಯಾಂತ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಇವಿಎಂ ಯಂತ್ರಗಳ ದುರುಪಯೋಗವಾಗುತ್ತಿದೆ. ಸಾಫ್ಟವೇರ್ ದುರ್ಬಳಕೆ ಮಾಡಿಕೊಳ್ಳುವ ಅಧಿಕಾರ ದುರುಪಯೋಗಮಾಡಿಕೊಳ್ಳುತ್ತಿರುವುದು, ಚುನಾವಣಾ ಅಕ್ರಮ ವೆಸಗುತ್ತಿರುವುದು ಕಂಡು ಬರುತ್ತಿರುವ ಹಿನ್ನಲೆಯಲ್ಲಿ, ಇದಕ್ಕೆಲ್ಲಾ ಕಡಿವಾಣ ಹಾಕಲು ಕೂಡಲೇ ಚುನಾವಣಾ ಆಯೋಗ ಇವಿಎಂ ಯಂತ್ರಗಳ ಬಳಕೆ ನಿಷೇಧಿಸಿ ಮತಪತ್ರಗಳ ಬಳಕೆಯನ್ನು ಚುನಾವಣೆಯಲ್ಲಿ ಮತ್ತೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ಸಂವಿಧಾನ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಎನ್.ಭಾಸ್ಕರರಾವ್, ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *