ಗೇರುಸೊಪ್ಪದ ಕೃಷ್ಣಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಹೊನ್ನಾವರ ತಾಲೂಕಿನ ಗೇರುಸೊಪ್ಪದ ಕೃಷ್ಣಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ನಮನಗೈದು ಗೌರವ ಅರ್ಪಿಸಲಾಯಿತು. ಶಾಲೆಯ ಆಡಳಿತ ವರ್ಗ, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರು ಅಂಬೇಡ್ಕರರ ಜೀವನಕ್ರಮ ಸಾಧನೆ ಪರಿಶ್ರಮವನ್ನು ಸ್ಮರಿಸಿದರು. ಆಡಳಿತಾಧಿಕಾರಿಯವರಾದ ಶ್ರೀ ವಿ ಟಿ ನಾಯ್ಕ್ ರವರು ಮಾತನಾಡಿ ಸಂವಿಧಾನ ಶಿಲ್ಪಿ ಅಂಬೇಡ್ಕರರು ಸಮಾನತೆಯನ್ನು ಜಗತ್ತಿಗೆ ಸಾರಿದವರು, ಇಂತಹ ಮಹಾನ್ ನಾಯಕರನ್ನು ಸ್ಮರಿಸಿದಾಗ ಮೈನವಿರೇಳುತ್ತದೆ ಎಂದರು. ಮುಖ್ಯಾಧ್ಯಾಪಕಿ ಶ್ರೀಮತಿ ಭಾರತಿ ಕುಲಕರ್ಣಿ ಮಾತನಾಡಿ ಅಂಬೇಡ್ಕರ್ ಅವರ ಸಾಧನೆಯ ಹಾದಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಂತಹ ದ್ದಾಗಿದೆ. ಅಂಬೇಡ್ಕರರ ಜೀವನಕ್ರಮವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅರಿತಿರಬೇಕು. ರಜಾ ದಿನದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಅಂಬೇಡ್ಕರರಿಗೆ ನಮನ ಸಲ್ಲಿಸುವ ಅವಕಾಶ ಸಿಗುತ್ತಿಲ್ಲ ಎನ್ನುವುದು ಬೇಸರದ ಸಂಗತಿ ಎಂದರು. ಈ ಸಂದರ್ಭದಲ್ಲಿ ಊರಿನ ಗಣ್ಯರು ಉಪಸ್ಥಿತರಿದ್ದರು.
ವರದಿ – ಸಂಪಾದಕೀಯ