ವಿಶ್ವ ಮಲೇರಿಯಾ ವಿರೋಧಿ ಮಾಸಾಚರಣೆ,,,,,

Spread the love

ವಿಶ್ವ ಮಲೇರಿಯಾ ವಿರೋಧಿ ಮಾಸಾಚರಣೆ,,,,,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕು ಆರೋಗ್ಯ ಕಾರ್ಯಲಯ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಮುಧೋಳ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಆವರಣದ ಮುಂದೆ ವಿಶ್ವ ಮಲೇರಿಯಾ ವಿರೋಧಿ ಮಾಸಾಚರಣೆಗೆ ಚಾಲನೆ ನೀಡಿ ಸಾಂಕ್ರಾಮಿಕ ರೋಗಗಳ ಕುರಿತು ಮಾತನಾಡಿದ ಗ್ರಾಂ ಪಂ ಅಧ್ಯಕ್ಷರಾದ ಭಾರತಿ ಶಿವಾನಂದ ಚಲವಾದಿ ಅವರು ಈ ಒಂದು ರೋಗ ಸೊಂಕಿನ ಸೊಳ್ಳೆಯು ಮನುಷ್ಯನನ್ನು ಕಚ್ಚಿದ 8 ರಿಂದ 14 ದಿನಗಳ ನಂತರ ಮಲೇರಿಯಾ ಜ್ವರದ ಲಕ್ಷಣಗಳು ಕಂಡು ಬರುತ್ತವೆ. ಇವುಗಳಲ್ಲಿ ಇದ್ದಕ್ಕಿಂತೆ ತೀವ್ರ ಜ್ವರ.ಚಳ್ಳಿಜ್ವರ.ನಡುಕ ವಾಂತಿ ಕಾಣಿಸಿಕೊಳ್ಳುತ್ತವೆ.ಆದಕಾರಣ ಮಲೇರಿಯಾ ರೋಗವನ್ನು ತಡೆಗಟ್ಟಲು ಸಾರ್ವಜನಿಕರು ಮನೆಯಲ್ಲಿ ಮತ್ತು ಮನೆಯ ಮುಂದೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಮತ್ತು ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಕೊಳ್ಳಿ ಮತ್ತು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ.ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಿ ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಿ ಮನೆಯ ಒಳಗೆ ಸೊಳ್ಳೆ ಬರದಂತೆ ಕಿಟಕಿ ಬಾಗಿಲುಗಳನ್ನು ಜಾಲರಿಗಳನ್ನು ಅಳವಡಿಸಿ ಎಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು, ನಂತರ ಮಾತನಾಡಿದ ಪ್ರಾ,ಆ, ಕೇಂದ್ರದ ಡಾ, ಪವನ್ ಕುಮಾರ್ ಅವರು ತಮ್ಮ ತಮ್ಮ ಮನೆಯ ಮುಂದೆ ಚರಂಡಿ ನೀರು ನಿಲ್ಲುವುದು  ತೆಂಗಿನ ಚಿಪ್ಪು, ಪ್ಲಾಸ್ಟಿಕ್‌ ಡಬ್ಬಿಗಳಲ್ಲಿ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡಲು ಕಾರಣವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಂಡು ಬರಬೇಕೆಂದು ಮಾಹಿತಿ ತಿಳಿಸಿದರು. ನಂತರ ಮಾತನಾಡಿದ ಹಿರಿಯ ನಿರೀಕ್ಷಣ ಅಧಿಕಾರಿಗಳಾದ ಶಂಕ್ರಣ್ಣ ಅಂಗಡಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಚಂದ್ರಬಾಯಿ ಕುದರಿ, ಪಿ ಡಿ ಓ ರವಿ ಲಿಂಗಣ್ಣನವರ, ಗ್ರಾಂ,ಪಂ, ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಗ್ರಾಮದ ಸಾರ್ವಜನಿಕರೆಲ್ಲರೂ ಭಾಗವಹಿಸಿದ್ದರು,

ವರದಿ – ಹುಸೇನಬಾಷಾ ಮೊತೇಖಾನ್

Leave a Reply

Your email address will not be published. Required fields are marked *