ಸಿಐಟಿಯು ಹಾಗೂ ಇತರೆ ಸಂಘಟನೆಯ ಮುಖಂಡರಿಂದ ಡಿ.ಎಸ್ ಹೂಲಗೇರಿ ಶಾಸಕರು, ಲಿಂಗಸುಗೂರು ಹಲವು ಬೇಡಿಕೆಗಳನ್ನು ಹೊತ್ತುಕೊಂಡು ಶಾಸಕರ ಮನೆ ಮುಂದೆ ಪ್ರತಿಭಟನೆ,,,,
೬೦ ವರ್ಷ ವಯೋಮಾನ ನೆಪವೊಡ್ಡಿ ೧೯ ವರ್ಷ ಸೇವೆಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ಶಾಸಕರ ಮನೆಯ ಮುಂದೆ ಪ್ರತಿಭಟನೆ. ಮಧ್ಯಾನ್ಹದ ಬಿಸಿಯೂಟ ಯೋಜನೆಯು ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರುಹಾಜರಿ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆಯವರನ್ನು ೬೦ ವರ್ಷ ವಯೋಮಾನ ನೆಪವೊಡ್ಡಿ ೧೯ ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮವನ್ನು ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು ಸಂಯೋಜಿತ) ತೀವ್ರವಾಗಿ ಖಂಡಿಸುತ್ತದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸುವುದರ ಜೊತೆಗೆ ಮಕ್ಕಳಲ್ಲಿ ಏಕಾಗ್ರತೆ ಮತ್ತು ಉತ್ತಮ ಫಲಿತಾಂಶ ಹೊರಹೊಮ್ಮಲು ಈ ತಾಯಂದಿರು ತಮ್ಮ ಜೀವ ಸೆವೆಸಿದ್ದಾರೆ. ರಾಜ್ಯದಲ್ಲಿ ಸುಮಾರು ೫೦ ಲಕ್ಷ ಬಡ, ರೈತ, ಕೃಷಿಕೂಲಿಕಾರರ, ದೀನದಲಿತ ಮಕ್ಕಳಿಗೆ ದಿನನಿತ್ಯ ಬಿಸಿ ಆಹಾರ ಬೇಯಿಸಿ ಬಡಿಸುವುದರೊಟ್ಟಿಗೆ ಆ ಮಕ್ಕಳಲ್ಲಿ ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ಈ ಮಹಿಳೆಯರ ತಾಯ್ತನದ ಪರಿಶ್ರಮವಿದೆ. ೨೦೦೧-೦೨ ರಲ್ಲಿ ಅಡುಗೆ ಕೆಲಸಕ್ಕೆ ಸೇರ್ಪಡೆ ಮಾಡಿಕೊಳ್ಳುವಾಗ ವಿಧ್ಯಾಭ್ಯಾಸ ಮತ್ತು ವಯಸ್ಸಿನ ಅರ್ಹತೆ ಮಾತ್ರ ನಿಗದಿಮಾಡಲಾಗಿತ್ತು. ಅದರಲ್ಲಿ ನಿವೃತ್ತಿ ವಯಸ್ಸನ್ನು ಸರ್ಕಾರದ ಕೈಪಿಡಿಯಲ್ಲಿ ನಿಗದಿಪಡಿಸಿರುವುದಿಲ್ಲ. ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು) ೨೦೧೬ ರಿಂದಲೂ ವಯಸ್ಸಿನ ಆಧಾರದಲ್ಲಿ ನಿವೃತ್ತಿ ಸೌಲಭ್ಯ ಕೊಡಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಮತ್ತು ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡರು ಇದರ ಬಗ್ಗೆ ಸರ್ಕಾರವಾಗಲಿ , ಶಿಕ್ಷಣ ಇಲಾಖೆಯಾಗಲಿ ಹೆಚ್ಚಿನ ಮುತುವರ್ಜಿ ವಹಿಸಲಿಲ್ಲ.ಆದರೆ ಬಿಸಿಯೂಟ ನೌಕರರ ನಿವೃತ್ತಿ ವಿಷಯಕ್ಕೆ ಸಂಭAದಿಸಿದAತೆ ಶಿಕ್ಷಣ ಇಲಾಖೆಯ ಸಚಿವರೊಂದಿಗೆ, ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ, ಆಯುಕ್ತರು, ಎಲ್.ಐ.ಸಿ ಯ ಪಿಂಚಣಿ ವಿಭಾಗದ ಮುಖ್ಯಸ್ಥರು ಹಾಗೂ ನಮ್ಮ ಸಂಘಟನೆಯ ಮುಖಂಡರೊAದಿಗೆ ಜಂಟಿಯಾಗಿ ಹಲವು ಬಾರಿ ಸಭೆಗಳಾಗಿವೆ. ಈ ಸಭೆಗಳಲ್ಲಿ ಬಿಸಿಯೂಟ ನೌಕರರ ವೇತನದಲ್ಲಿ ರೂ.೧೦೦ ಹಾಗೂ ಸರ್ಕಾರ ರೂ ೧೦೦ ರೂ ನೀಡಿ ಈ ಹಣವನ್ನು ಎಲ್.ಐ.ಸಿ ಮುಖಾಂತರ ವಿಶೇಷ ಪಿಂಚಣಿ ಯೋಜನೆಯನ್ನು ರೂಪಿಸಲು ಒಪ್ಪಿಗೆ ಸೂಚಿಸಲಾಗಿತ್ತು. ಹಾಗೂ ಇಲಾಖಾ ಅಧಿಕಾರಿಗಳು ಮತ್ತು ನಮ್ಮ ಸಂಘಟನೆಯ ಮುಖಂಡರನ್ನು ಒಳಗೊಂಡ ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು. ಆದರೆ ಈ ಎಲ್ಲ ಕ್ರಮಗಳು ಜಾರಿಯಾಗುವ ಮೊದಲೇ ಸರ್ಕಾರ ಏಕಾಏಕಿ ಬಿಸಿಯೂಟ ನೌಕರರನ್ನು ಕೆಲಸದಿಂದ ನಿವೃತ್ತಿ ಮಾಡುತ್ತಿರುವುದು ಅಮಾನವೀಯ ಮತ್ತು ಮಹಿಳಾ ವಿರೋಧಿ ಧೋರಣೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸುಮಾರು ೧೧೦೦೦ ರಿಂದ ೧೨,೦೦೦ ನೌಕರರ ಕೆಲಸವನ್ನು ಯಾವುದೇ ನಿವೃತ್ತಿ, ಸೌಲಭ್ಯವಿಲ್ಲದೆ ಸರ್ಕಾರ ತೆಗೆದುಹಾಕಲು ಮುಂದಾಗಿದೆ. ಇದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುವುದಲ್ಲದೇ ಸರ್ಕಾರ ಕೂಡಲೇ ಈ ಸುತ್ತೋಲೆಯನ್ನು ವಾಪಸ್ಸು ಪಡೆಯಬೇಕೆಂದು ಮತ್ತು ಈ ಬಡ, ವಿಧವಾ, ಅಲ್ಪಸಂಖ್ಯಾತ. ದಲಿತ, ಕೂಲಿಕಾರ ಮಹಿಳೆಯರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತದೆ. ಸರ್ಕಾರ ನಿವೃತ್ತಿ ವೇತನ ನಿಗದಿ ಮಾಡುವವರೆಗೆ ಈ ತಕ್ಷಣದಲ್ಲಿ ಬಿಡುಗಡೆಮಾಡುವ ಬಿಸಿಯೂಟ ನೌಕರರಿಗೆ ಇಡಿಗಂಟು ರೂ. ೧,೦೦,೦೦೦/-(ಒಂದು ಲಕ್ಷ ರೂಪಾಯಿಗಳು) ಪರಿಹಾರ ನೀಡಬೇಕು. ಇದಕ್ಕೆ ಸಂಭAದಿಸಿದAತೆ ದಿ:೧೧-೦೪-೨೦೨೨ ರಂದು ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆಯ ಮೂಲಕ ಮನವಿ ಸಹ ಸರ್ಕಾರಕ್ಕೆ ನೀಡಲಾಗಿದೆ. ಆದರೆ ಸರ್ಕಾರವು ಈ ಬೇಡಿಕೆಗಳಿಗೆ ಸ್ಪಂದಿಸಲಿಲ್ಲ ಆದ್ದರಿಂದ ಎಪ್ರೀಲ್ ೧೮, ೨೦೨೨ ರಂದು ಬೆಂಗಳೂರಿನ ಅಕ್ಷರದಾಸೋಹ ಯೋಜನೆಯ ಜಂಟಿ ನಿರ್ದೇಶಕರ ಕಛೇರಿಯನ್ನು ಮುತ್ತಿಗೆ ಹಾಕಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರದಿಂದ ಜಂಟಿ ಸಭೆ ಕರೆಯುವ ಆಶ್ವಾಸನೆ ದೊರೆತಿತ್ತು. ಆದರೆ ಇದುವರೆಗೂ ಜಂಟಿ ಸಭೆ ಕರೆಯದಿರುವುದನ್ನು ಮತ್ತು ಪರಿಹಾರ ನೀಡಲು ನೀರಾಕರಿಸಿರುವುದನ್ನು ವಿರೋಧಿಸಿ ೨೨೪ ಶಾಸಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ, ಶಿಕ್ಷಣ ಸಚಿವರ ಮನೆಯ ಮುಂದೆ ೨೦೨೨, ಮೇ ತಿಂಗಳಿನಲ್ಲಿ ಹೋರಾಟ ನಡೆಸಲಾಗುವುದು ಆದ್ದರಿಂದ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ.
ಬೇಡಿಕೆಗಳು:
೬೦ ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಬಿಡುಗಡೆ ಮಾಡಬೇಕು.
ಮಾರ್ಚ ೩೧, ೨೦೨೨ ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರೀಲ್ ೧೦,೨೦೨೨ ಕ್ಕೆ ಮರುಆದೇಶ ನಿಡಬೇಕು.
ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ ರೂ.೧೦೦೦ ವೇತನವನ್ನು ಜನವರಿ ೨೦೨೨ ರಿಂದ ಅನ್ವಯಿಸಿ ಜಾರಿ ಮಾಡಬೇಕು.
ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ ೪೫ ಮತ್ತು ೪೬ ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು.
ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.
ನಮ್ಮ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಶಿಫಾರಸ್ಸಿನಂತೆ ೬೦೦೦ ರೂ. ಮತ್ತು ೫೦೦೦ ರೂ ವೇತನ ಹೆಚ್ಚಳ ಮಾಡಬೇಕು.
ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಟ್ಟಿಕೊಡಬೇಕು.
ಶಾಲಾ ಅವಧಿಯನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ನೀಡಿ ನರೇಗಾ ಯೋಜನೆಯಿಂದ ವೇತನ ನೀಡುವಂತಾಗಬೇಕು.
ಮಕ್ಕಳ ಅಪೌಷ್ಟಿಕತೆ ತಡೆ ಹಿಡಿಯಲು ಅನುಕೂಲವಾಗುವ ಮೊಟ್ಟೆ- ಬಾಳೆಹಣ್ಣನ್ನು ಎಲ್ಲಾ ಜಿಲ್ಲೆಗಳಿಗಳಿಗೂ ವಿಸ್ತರಿಸಬೇಕು.
ಎಲ್ಲರಿಗೂ ಅನ್ವಯವಾಗದೇ ಇರುವ ಮಾನ್-ಧನ್ ಯೋಜನೆ ಮಾಡಿಸಲು ಇಲಾಖೆಯಿಂದ ಒತ್ತಾಯಿಸಬಾರದು.
ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು.
ಬಿಸಿಯೂಟ ನೌಕರರನ್ನು ಖಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ಜಾರಿ ಮಾಡಬೇಕು.
ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು ೫ ನೇ ತಾರೀಖಿನ ಒಳಗೆ ವೇತನ ಪಾವತಿಯಾಗಬೇಕು.
ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು.
ಪ್ರತಿಶಾಲೆಯಲ್ಲಿ ಕನಿಷ್ಠ ೨ ಜನ ಅಡುಗೆಯವರು ಇರಲೇಬೇಕು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಹಕಾರ್ಯದರ್ಶಿ ಮಹ್ಮದ್ ಹನೀಫ್, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಅಕ್ಷರ ದಾಸೋಹ ನೌಕರರ ಸಂಘಟನೆಯ ನಾಗರತ್ನ ಸಂತೆಕೆಲ್ಲೂರು, ವೆಂಕಟೇಶ ಮೇದಿನಾಪೂರ ಕಮಲಾಬಾಯಿ ಮುದಗಲ್, ರೇಣುಕಾ ಸಂತೆಕೆಲ್ಲೂರು, ಆಟೋ ಯೂನಿಯನ್ ತಾಲೂಕಾಧ್ಯಕ್ಷ ಬಾಬಾ ಜಾನಿ ಲಿಂಗಸುಗೂರು, ಕೆಪಿಆರ್ ಎಸ್ ಮುಖಂಡ ಆಂಜನೇಯ ನಾಗಲಾಪೂರು, ಸಿಐಟಿಯು ಮುಖಂಡ ವೆಂಕಟೇಶ ಸೇರಿದಂತೆ ಅನೇಕರು ಇದ್ದರು.
ವರದಿ – ಸಂಪಾದಕೀಯ