ಬೆಂಗಳೂರು ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ, ಲಂಚ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ಬಂಧನ,.,,,
ಬೆಂಗಳೂರು: ಬೆಂಗಳೂರು ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿದ್ದು, ಜಿಲ್ಲಾಧಿಕಾರಿ ಮಂಜುನಾಥ್ ಕಚೇರಿಯಲ್ಲಿ ಕೆಲಸ ಮಾಡೋ ತಹಸೀಲ್ದಾರ್ ಮಹೇಶ್ 5 ಲಕ್ಷ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈಗ ಜಿಲ್ಲಾಧಿಕಾರಿ ಕಚೇರಿಯಲ್ಲೇ ಬೀಡು ಬಿಟ್ಟಿರೋ 6 ಜನ ಎಸಿಬಿ ಅಧಿಕಾರಿಗಳ ತಂಡ 30 ನಿಮಿಷಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಡಿಸಿ ಮಂಜುನಾಥ್ ಮಹೇಶ್ ಮೂಲಕ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. 5 ಲಕ್ಷ ಹಣ ಪಡೆಯುವ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳ ಬಲೆಗೆ ತಹಶೀಲ್ದಾರ್ ಮಹೇಶ್, ಕೋರ್ಟ್ ಸಹಾಯಕ ಚಂದ್ರು ಸಿಕ್ಕಿಹಾಕಿಕೊಂಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಡಿಸಿ ಮಾರ್ಗದರ್ಶನದಲ್ಲಿ ಹಣ ಪಡೆದಿದ್ದಾರೆ ಎಂಬ ಆರೋಪವಿದೆ ಆದರೆ ಆರೋಪಕ್ಕೆ ಸಾಕ್ಷ್ಯ ಇಲ್ಲ ಎಂದ ಎಸಿಬಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಮಂಜುನಾಥ್ ಎಸಿಬಿ ದಾಳಿ ನಡೆದಿದೆ. ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ನಾನು ಬೇರೆ ಕಾರ್ಯಕ್ರಮದಲ್ಲಿ ಇದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ.
ವರದಿ – ಮಹೇಶ ಶರ್ಮಾ