ಅಮೃತ ಭಾರತಿಗೆ ಕನ್ನಡದ ಆರತಿ ಚಾಲನೆ : ಸಚಿವ ಬಿ.ಸಿ.ನಾಗೇಶ….
ನಮ್ಮದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹೋರಾಟದ ಘಳಿಗೆಗಳನ್ನು ಸ್ಮರಿಸುವ ಉದ್ದೇಶದಿಂದ ರಾಜ್ಯದಲ್ಲಿ ಸ್ವಾತಂತ್ರ್ಯ ಭಾರತಿಗೆ ಕನ್ನಡದಾರತಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಂದು ಕಾರ್ಯಕ್ರಮಗಳ ಮೂಲಕ ಇಂದಿನ ಹಾಗೂ ಮುಂದಿನ ಪೀಳಿಗೆಯಲ್ಲಿ ದೇಶದ ಕುರಿತಾದ ಸ್ವಾಭಿಮಾನ ಹಾಗೂ ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸಬೇಕಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರು ಹೇಳಿದರು. ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ ಆಯೋಜಿಸಲಾಗಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕನ್ನಡದ ಹೋರಾಟಗಾರರನ್ನು, ಅವರ ತ್ಯಾಗ ಬಲಿದಾನಗಳನ್ನು ಕೂಡ ನಾವಿಂದು ಸ್ಮರಿಸಬಹುದು. ಹಾಗೆಯೇ ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಮಹನೀಯರ ತ್ಯಾಗಗಳನ್ನು ಇಂದಿನ ಹಾಗೂ ಮುಂದಿನ ಪೀಳಿಗೆಯವರಿಗೆ ತಿಳಿಸುವ ಅಗತ್ಯವಿದೆ ಎಂದು ಅವರಲ್ಲಿ ಸ್ವಾಭಿಮಾನ, ದೇಶ ಪ್ರೇಮವನ್ನು ಜಾಗೃತಗೊಳಿಸಬೇಕಿದೆ ಎಂದು ಅವರು ಹೇಳಿದರು. ಇದೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳರ್, ಜಿ ಪಂ ಸಿಇಒ ಬಿ.ಫೌಜಿಯಾ ತರನ್ನುಮ್, ಎಸ್ಪಿ ಅರುಣಾಂಗ್ಯುಗಿರಿ, ಸಹಾಯಕ ಆಯುಕ್ತ ಬಸವಣಪ್ಪ ಕಲಶೆಟ್ಟಿ, ತಹಶೀಲ್ದಾರ ವಿಠಲ್ ಚೌಗಲೆ,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮುತ್ತರೆಡ್ಡಿ ಇ. ರಡೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಂಸದರಾದ ಸಂಗಣ್ಣ ಕರಡಿ ಶಾಸಕರಾದ ಅಮರೇಶ್ ಬಯ್ಯಾಪುರ, ಇತರ ಉಪಸ್ಥಿತರು ಇದ್ದರು..
ವರದಿ – ಹುಸೇನಬಾಷಾ ಮೋತೆಖಾನ್