ಕೆ.ಪಿ.ಎಸ್.ಶಾಲೆಯಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ಸಸಿಗಳನ್ನು ನೆಡಲಾಯಿತು…..
ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗ ಸರ್ಕಾರಿ ಮಾಧ್ಯಮಿಕ ಶಾಲೆ ತಾವರಗೇರಾದಲ್ಲಿ ಇಂದು ವಿಶ್ವ ಪರಿಸರ ದಿನದ ಅಂಗವಾಗಿ ಸಸಿಗಳನ್ನು ನೆಡಲಾಯಿತು. ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.
ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವನ್ನು 1974 ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972 ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 ಜೂನ್ 5 ರಂದು ಮೊದಲು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸಿಬ್ಬಂದಿ ಶಮಮೂರ್ತಿ ಕಟ್ಟಿಮನಿ ಶ್ರೀ ಪರಸಪ್ಪ ಹೊಸಮನಿ ದೈಹಿಕ ಶಿಕ್ಷಕರು ಶ್ರೀ ಮಲ್ಲಂಗಸಾ ವಾಲೇಕರ್ ಶ್ರೀ ಶಾಮಣ್ಣ ಶ್ರೀ ತುಕಾರಾಂ ಶಂಕರ್ ರಾಥೋಡ್ ಇತರ ಹಾಜರಿದ್ದರು.
ವರದಿ – ಸಂಪಾದಕೀಯ