ಕೆ.ಪಿ.ಎಸ್ ಶಾಲೆ ತಾವರಗೇರಾ ಪಟ್ಟಣದಲ್ಲಿಂದು 8ನೇ ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಆಚರಿಸಲಾಯಿತು.
ತಾವರಗೇರಾ ಪಟ್ಟಣದ ಕೆ.ಪಿ.ಎಸ್. ಶಾಲೆಯಲ್ಲಿಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಆಚರಿಸಲಾಯಿತು. ಪ್ರತಿ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ. ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಚಾರ್ಯರು ಡಾಕ್ಟರ್ ಎಸ್ಸೆ ಎಸ್ ಫೋರe ಶ್ರೀ ಮಂಜುನಾಥ ಬಿಳೆಗುಡ್ಡ ಶ್ರೀ ಈರಪ್ಪ ಜೋಡಿ ಶ್ರೀಮತಿ ಸುನೀತಾ ಶ್ರೀ ತುಕಾರಾಂ ಶ್ರೀ ಮಲ್ಲಂಗದ ವಾಲಿಕಾರ್ ಶ್ರೀ ಪರಸಪ್ಪ ಹೊಸಮನಿ ಶ್ರೀ ಅಂಬರೀಶ ಜಗನ್ನಾಥ್ ಮಡಿಕೇರಿ ಶ್ರೀ ಕಾಜಾ ಹುಸೇನ್ ಇನ್ನಿತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು… ವರದಿ – ಸಂಪಾದಕೀಯ