ಪರಿಸರ ಜಾಗೃತಿ ಜಾಥಾ.
ಚಿಟಗುಪ್ಪಾ : ಪರಿಸರ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಚಿಟಗುಪ್ಪಾ ತಾಲೂಕು ಜಾನಪದ ಸಾಹಿತ್ಯ ಪರಿಷತ್ತು ಹಾಗೂ ವಿಜ್ಞಾನ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಜನಜಾಗೃತಿ ಹಾಗೂ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪರಿಸರ ವಾಹಿನಿ ಜಿಲ್ಲಾ ಮುಖ್ಯಸ್ಥರಾದ ಶೈಲೇಂದ್ರ ಕವಡೆ ರವರು ಕಾಡು ಬೆಳೆಸಿ,ನಾಡು ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಇಂದು ಜಾಗತಿಕ ಪ್ರಪಂಚ ಪರಿಸರ ಅಳಿಸುವ ಕಾರ್ಯದಲ್ಲಿ ತೊಡಗಿದೆ. ಸಮಾಜಕ್ಕೆ ಹಾನಿ ಉಂಟು ಮಾಡುತ್ತಿದೆ. ಆದ ಕಾರಣ ಪರಿಸರ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮ ಹಾಕಬೇಕೆಂದು ತಿಳಿಸಿದರು. ವಿಜ್ಞಾನ ಪರಿಷತ್ತಿನ ರಾಜ್ಯ ಸಮಿತಿಯ ಸದಸ್ಯರಾದ ಮಾಹಾರುದ್ರಪ್ಪಾ ಅಣದೂರ ಮಾತನಾಡಿ ಪರಿಸರ ಮಾಲಿನ್ಯ ತಡೆಗಟ್ಟಲು ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಸುರೇಂದ್ರನಾಥ ಹುಡಿಕರ್ ಮಾತನಾಡಿ ಪರಿಸರ ಕುರಿತು ಜಾಗೃತಿ ಸರ್ವರಲ್ಲಿಯೂ ಮೂಡಿಸುವ ಚಟುವಟಿಕೆಗಳು ಮಾಡುತ್ತೀದ್ದೇವೆ ಎಂದರು. ಚಿಟಗುಪ್ಪಾ ತಾಲೂಕು ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಂಗಮೇಶ ಎನ್ ಜವಾದಿ ಮಾತನಾಡಿ ಮನುಷ್ಯನ ಅತೀ ಆಸೆ, ಏರುತ್ತಿರುವ ಜನಸಂಖ್ಯೆ, ವೈಭವೋಪೇತ ಜೀವನದ ಬಯಕೆಗಳು ಪರಿಸರವನ್ನು ಹಾಳುಮಾಡುತ್ತಿವೆ. ನಮ್ಮ ಸುತ್ತಮುತ್ತಲಿನ ನೀರು, ಗಾಳಿ, ಭೂಮಿ, ಎಲ್ಲವೂ ಇಂದು ಅತೀ ಹೆಚ್ಚು ಕಲುಷಿತಗೊಳ್ಳುತ್ತಿವೆ. ಪರಿಸರ ಪ್ರೇಮಿಗಳು, ವಿದ್ಯಾವಂತರು, ಸರ್ಕಾರಗಳು ಕಾಲದಿಂದ ಕಾಲಕ್ಕೆ ಅನೇಕ ಕ್ರಮಗಳನ್ನು ಕೈಗೊಂಡು ಪರಿಸರವನ್ನು ಮಾಲಿನ್ಯದಿಂದ ರಕ್ಷಿಸುವ ಪ್ರಯತ್ನವನ್ನು ಮಾಡುತ್ತಲೇ ಬಂದಿದ್ದಾರೆ.ಈ ದಿಸೆಯಲ್ಲಿ ಇಂದಿನ ಜಾಥಾ ಮಾದರಿ ಎಂದು ಹೇಳಿದರು. ತಾಲೂಕು ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸ ಕುಲಕರ್ಣಿಯವರು ಸ್ವಾಗತಿಸಿ,ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಸ್ಲಾಮೀಯಾ ಆಜಾಮ್ ಸ್ವೀಟ್ ಹೌಸ್ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.
ವರದಿ – ಸಂಗಮೇಶ ಎನ್ ಜಾವದಿ