ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿ ಪಡೆದು ಕೊಳ್ಳಿ: ಅಹ್ಮದ್ ಹುಸೇನ್.
ಕನಕಗಿರಿ: ಬೀದಿ ಬದಿ ವ್ಯಾಪಾರಸ್ಥರು ಬಡ ಮಧ್ಯಮ ವರ್ಗದವರಾಗಿರುತ್ತಾರೆಂದು ಅರಿತು ಸರ್ಕಾರಗಳು ಸಾಲಸೌಲಭ್ಯ ಅಲ್ಲದೆ ಹಲವು ರೀತಿಯ ಯೋಜನೆಗಳನ್ನು ರೂಪಿಸಿದ್ದು, ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದರೆ ಪಟ್ಟಣ ಪಂಚಾಯಿತಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ಇಲಾಖೆ ನೀಡುವ ಗುರುತಿನ ಚೀಟಿ ಪಡೆದು ಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನಾ ಇಲಾಖೆ ತರಬೇತಿ ತಜ್ಞರಾದ ಅಹ್ಮದ್ ಹುಸೇನ್ ಹೇಳಿದರು. ಈ ಸಂದರ್ಭದಲ್ಲಿ ಅವರು ಪೌರಾಡಳಿತ, ನಿರ್ದೇಶನಾಲಯ ಬೆಂಗಳೂರ, ಜಿಲ್ಲಾಡಳಿತ ಕೊಪ್ಪಳ, ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಗುರುವಾರ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ದಿನಾದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ಬೀದಿ ಬದಿ ವ್ಯಾಪಾರಿಗಳ ಬೆಂಬಲ ಉಪಘಟಕದಡಿ ಬೀದಿ ಬದಿ ವ್ಯಾಪಾರಿಗಳಿಗೆ 2 ದಿನಗಳ ತರಬೇತಿ ಕಾರ್ಯಾಗಾರದಲ್ಲಿ ತರಭೇತಿದಾರರಾಗಿ ಭಾಗವಹಿಸಿ ಮಾತನಾಡಿದರು.
ವರದಿ – ಆದಪ್ಪ ಮಾಲಿ ಪಾಟೀಲ್