ಅಮ್ಮ…………………..
ನಮ್ಮೆಲ್ಲರ ಬದುಕಿನ ಜೀವಂತ ಪವಾಡ ತನ್ನೊಡಲಲ್ಲಿ ಮುದ್ದು ಮಗುವೊಂದು ಚಿಗುರೊಡೆಯುತ್ತಿದೆ ಎಂಬುದು ತಿಳಿಯುತ್ತಿದ್ದಂತೆಯೇ ಹೆಣ್ಣು ತಾಯ್ತನದ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಳ್ತಾಳೆ. ಒಬ್ಬ ಸಾಮಾನ್ಯ ಹೆಣ್ಣು ದೈವತ್ವಕ್ಕೇರುವ ಪಯಣ ಆರಂಭವಾಗೋದೇ ಆಗ. ತೊದಲು ನುಡಿವ ಕಂದನ ಬಾಯಿಂದ ಮೊದಲ ಬಾರಿಗೆ ಬಂದ ‘ಅಮ್ಮ’ ಎಂಬ ಪದಕ್ಕೆ ಹೆಣ್ಣಿನ ಬದುಕನ್ನೇ ಸಾರ್ಥಕಗೊಳಿಸುವ ಶಕ್ತಿಯಿದೆ! ಹೌದು, ಮತ್ತೆ ಬಂದಿದೆ ಅಮ್ಮಂದಿರ ದಿನ. ಆಕೆಯ ಬಗ್ಗೆ ಬರೆಯುವುದಕ್ಕೆ ಹೋದರೆ ಭಾಷೆ ಬಡವಿ ಅನ್ನಿಸುತ್ತೆ. ಯಾವುದೇ ಪದದಲ್ಲಿ ಅವಳನ್ನು ವರ್ಣಿಸುವುದಕ್ಕೆ ಹೋದರೂ, ಆಕೆಯ ಪಾತ್ರದೆದುರು ಆ ಪದವೇ ಸೋತುಬಿಡುತ್ತದೆ! ಒಂದು ಪದದಲ್ಲಿ, ಒಂದು ವಾಕ್ಯದಲ್ಲಿ, ಒಂದು ಕತೆಯಲ್ಲಿ, ಒಂದು ಹೊತ್ತಿಗೆಯಲ್ಲಿ ಹಿಡಿದಿಡಲು ಸಾಧ್ಯವಾಗದ ಮಹೋನ್ನತ ವ್ಯಕ್ತಿತ್ವ ಅಮ್ಮನದು ಅಕ್ಷರದಿಂದ ಅಮ್ಮಂದಿರ ವರ್ಣಿಸಲು ಸಾಧ್ಯವಿಲ್ಲ ತಾಯಿ ಎಂಬ ಶಿಲ್ಪಿಗೆ ಆಕಾರವಿಲ್ಲದ ಕಲ್ಲನ್ನೂ ಸಂಸ್ಕಾರದ ಉಳಿಪೆಟ್ಟಿನಿಂದ ಪೂಜನೀಯ ಮೂರ್ತಿಯನ್ನಾಗಿಸುವ ತಾಕತ್ತಿದೆ. ಇಂದು ಮಹೋನ್ನತವಾದದ್ದನ್ನು ಸಾಧಿಸಿದ ಶೇ.95 ರಷ್ಟು ಜನರ ಸಾಧನೆಯಲ್ಲಿ ನಿಸ್ಸಂದೇಹವಾಗಿ ಅವರಮ್ಮನ ಬೆವರಿದೆ, ಆಕೆಯ ನಿದ್ದೆಯಿಲ್ಲದ ರಾತ್ರಿಯಿದೆ, ಹಸಿದ ಹೊಟ್ಟೆಯ ತ್ಯಾಗವಿದೆ ಮೈಮೇಲೆ ಮನೆ ಬಿದ್ದಿದ್ರೂ ಮಗುವನ್ನು ಹೊಟ್ಟೆಯಲ್ಲಿ ರಕ್ಷಿಸಿದ ಮಹಾತಾಯಿ ಸ್ವಂತ ಮಗನಿಂದ ಪರಿತ್ಯಕ್ತಳಾಗಿ ವೃದ್ಧಾಶ್ರಮದ ಮೂಲೆಯೊಂದರಲ್ಲಿ ಕೂತರೂ ಅದೇ ಮಗನ ಬಾಲ್ಯವನ್ನು ನೆನಪಿಸಿಕೊಂಡು ನಸುನಗೆಬೀರುವ, ಆತನ ಭವಿಷ್ಯ ಚೆನ್ನಾಗಿರಲೆಂದು ಎರಡೂ ಕೈಯೆತ್ತಿ ಹಾರೈಸುವ ಆ ದೈವತ್ವದ ಸಾಕಾರ ಮೂರ್ತಿಯನ್ನು ಪುಟ್ಟ ಲೇಖನದಲ್ಲಿ ಕಟ್ಟಿಹಾಕೋಕೆ ಸಾಧ್ಯಾನಾ..? ಜಗ ಮೆಚ್ಚಿದ ಸಂತನ ಕಣ್ಣಲ್ಲಿ ಅಮ್ಮ ಜಗ ಮೆಚ್ಚಿದ ಸಂತನ ಕಣ್ಣಲ್ಲಿ ಅಮ್ಮ ಈಗ ನಾನು ಏನಾಗಿದ್ದೀನೋ, ಅದಕ್ಕೆ ಕಾರಣ ನಮ್ಮಮ್ಮ. ನಾನು ಇನ್ನೇನೇ ಆದರೂ ಆಕೆಯ ಋಣವನ್ನು ತೀರಿಸುವುದಕ್ಕಂತೂ ಸಾಧ್ಯವಿಲ್ಲ ಎಂಬ ಮಹಾನ್ ಸಂತ ಸ್ವಾಮಿ ವಿವೇಕಾನಂದರ ಮಾತು ತಾಯಿ ಎಂಬ ಪಾತ್ರದ ಮಹೋನ್ನತಿಯನ್ನು ಪ್ರಸ್ತುತಪಡಿಸುತ್ತದೆ. ತಾಯಿಗಿಂತ ದೊಡ್ಡದು ಇನ್ನೇನೂ ಇಲ್ಲ ತಾಯಿಗಿಂತ ದೊಡ್ಡದು ಇನ್ನೇನೂ ಇಲ್ಲ ತಾಯಿ ಖುಷಿಯಾಗಿದ್ದರೆ ಕುಟುಂಬ ಖುಷಿಯಾಗಿರುತ್ತದೆ, ಕುಟುಂಬ ಖುಷಿಯಾಗಿದ್ದರೆ ದೇಶ ಖುಷಿಯಾಗಿರುತ್ತದೆ. ಅಂದರೆ ಇಡೀ ದೇಶದ ಖುಷಿ ತಾಯಿಯ ಮೇಲೆ ನಿಂತಿದೆ. ತಾಯಿಗಿಂತ ದೊಡ್ಡದು ಇನ್ನೇನು ಇಲ್ಲ ಎಂಬ ಭಾವ ವ್ಯಕ್ತವಾಗಿದೆ. ಆಕೆ ಕೊಟ್ಟ ಉತ್ತರ ಜೀವನದಲ್ಲಿ ಎಂದೂ ಮರೆಯಲಾಗದು
ವರದಿ – ಸಂಪಾದಕೀಯ