ಪಟ್ಟಣದಲ್ಲಿ ಸಚಿವರಿಗೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಗ್ರಾಮಸ್ಥರಿಂದ ಮನವಿ ಸಲ್ಲಿಕೆ……

Spread the love

ಪಟ್ಟಣದಲ್ಲಿ ಸಚಿವರಿಗೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಗ್ರಾಮಸ್ಥರಿಂದ ಮನವಿ ಸಲ್ಲಿಕೆ……

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಉದ್ಘಾಟನೆ ಕಾರ್ಯಕ್ರಮ ಚಾಲನೆ ನೀಡುವ ಮೂಲಕ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರು ಯಲಬುರ್ಗಾ ಪಟ್ಟಣಕ್ಕೆ ಭೇಟಿ ನೀಡಿದ್ದರು, ನಂತರ ಚಿಕ್ಕಮ್ಯಾಗೇರಿ ಗ್ರಾಮಸ್ಥರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿ.ಸಿ ರಸ್ತೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಗ್ರಾಮ ಪಂಚಾಯತಿ ಆಡಳಿತ ಮಂಡಳಿಯವರು ಸಚಿವ ಹಾಲಪ್ಪ ಆಚಾರಗೆ ಭಾನುವಾರ ಯಲಬುರ್ಗಾದಲ್ಲಿ ಮನವಿ ಸಲ್ಲಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆಂಚಮ್ಮರಾಮಣ್ಣ ಹಿರೇಮನಿ, ಜಿಪಂ ಮಾಜಿ ಉಪಾಧ್ಯಕ್ಷ ಶಿವಶಂಕ‌ ಲಿಂಗರಾಜ ದೇಸಾಯಿ ಮಾತನಾಡಿ, ಗ್ರಾಮದಲ್ಲಿ ಸುಮಾರು ಐದಾರು ಸಾವಿರ ಜನಸಂಖ್ಯೆ ಹೊಂದಿದೆ. ಜನರ ಆರೋಗ್ಯದ ಹಿತ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವಶ್ಯಕತೆ ಇದೆ. ಈ ಕಾರಣದಿಂದಾಗಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕು.ಜೊತೆಗೆ ಒಂದನೇ ವಾರ್ಡಿನ ಪ್ಲಾಟ್‌ ನ ಸಿ. ಸಿ. ರಸ್ತೆ ಹಾಗೂ ವಿವಿಧ ದೇವಾಲಯಗಳ ಜೀರ್ಣೋದ್ಧಾರ ಹಾಗೆಯೇ ಇನ್ನಿತರ ಗ್ರಾಮದ ಅಭಿವೃದ್ಧಿಗಾಗಿ ಕಾರ್ಯಗಳನ್ನು ತ್ವರಿತ ಗತಿಯಲ್ಲಿ ಮಂಜೂರು ಮಾಡಬೇಕು ಎಂದರು. ಗ್ರಾಪಂ ಉಪಾಧ್ಯಕ್ಷ ಶರಣಪ್ಪ ಕುರಿ, ಸದಸ್ಯರಾದ ಶರಣಕುಮಾರ್ ಅಮರಗಟ್ಟಿ,ಯಮನೂರಪ್ಪ ಕುರಿ, ಶರಣಪ್ಪ ಕರಡದ, ಮುಖಂಡರಾದ ರಾಮಣ್ಣ ಹಿರೇಮನಿ, ಇನ್ನೂ ಹಲವಾರು ಉಪಸ್ಥಿತರಿದ್ದರು,

ವರದಿ – ಹುಸೇನಬಾಷ ಮೋತೆಖಾನ್

Leave a Reply

Your email address will not be published. Required fields are marked *