ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸಿ:ಎಡಿಸಿ ಎಂ.ಪಿ.ಮಾರುತಿ,,,,,

Spread the love

ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸಿ:ಎಡಿಸಿ ಎಂ.ಪಿ.ಮಾರುತಿ,,,,,

ಕನಕಗಿರಿ : ಸಾರ್ವಜನಿಕರು ಅಹವಾಲುಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ರವರು ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಸುಳೇಕಲ್ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ – ಹಳ್ಳಿ ಕಡೆ ಗ್ರಾಮ ವಾಸ್ತವ್ಯಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸುವುದಕ್ಕಾಗಿ ಅಧಿಕಾರಿಗಳು ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಪ್ರಾರಂಭದಿಂದಲೇ ಜನರ ಅಹವಾಲುಗಳನ್ನು ಆಲಿಸಲು ಮುಂದಾದ ಅಪರ ಜಿಲ್ಲಾಧಿಕಾರಿ ಜನಸಾಮಾನ್ಯರ, ವಿದ್ಯಾರ್ಥಿಗಳ, ರೈತರ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ, ತಾಲೂಕಿನ ಜೀರಾಳ ರಸ್ತೆ ದುರಸ್ತಿ, ಕಲಿಕೇರಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣ, ಸುಳೇಕಲ್ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣ, ಬಸ್ ಸಂಚಾರ, ಅಕ್ರಮ ಮದ್ಯ ಮಾರಾಟ, ಮನೆ ಮಂಜೂರಾತಿ, ಕೃಷಿ ಸೌಲಭ್ಯಗಳು, ಶಾಲಾ ಆಟದ ಮೈದಾನ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಜನರ ಅಹವಾಲುಗಳನ್ನು ಆಲಿಸಿ ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ಭರವಸೆ ನೀಡಿದರು.ಪ್ರಾಸ್ತಾವಿಕವಾಗಿ ಸಹಾಯಕ ಆಯುಕ್ತ ಬಸವಣ್ಣೆಪ್ಪ ಮಾತನಾಡಿ, ಕಳೆದ ಕೆಲವು ವರ್ಷಗಳ ಹಿಂದೆ ಜನಸಾಮಾನ್ಯರು ಸರ್ಕಾರಿ ಸೌಲಭ್ಯ ಪಡೆಯಲು ಕಷ್ಟಪಡುವ ಪರಿಸ್ಥಿತಿಯಿತ್ತು. ಈಗ ಅದು ಸುಲಭವಾಗಿದ್ದು, ಜನರ ಸಮಕ್ಷಮದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಆಗುತ್ತಿದೆ. ಗ್ರಾಮವಾಸ್ತವ್ಯ ಕಾರ್ಯಕ್ರಮದ ಮೂಲಕ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಯತ್ನಿಸುತ್ತಾರೆ. ಹಾಗಾಗಿ ಜನಸಾಮಾನ್ಯರು ಅಧಿಕಾರಿಗಳ ಜೊತೆ ಕೈಜೋಡಿಸಿದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಾಯಕವಾಗುತ್ತದೆ ಎಂದರು. ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆ, ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂಸ್ಥೆ ಹಾಗೂ ಜಿ.ಪಂ.

ವರದಿ – ಆದಪ್ಪ ಮಾಲಿ ಪಾಟೀಲ್

Leave a Reply

Your email address will not be published. Required fields are marked *