ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ,,,,
ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರವರೆಗೆ ದೇಶಾದ್ಯಂತ ಹರ್ ಘರ್ ತಿರಂಗಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳು,ಶಾಲಾ ಕಾಲೇಜು ಮತ್ತು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಪ್ರತಿ ಮನೆಗೂ ತ್ರಿವರ್ಣ ಧ್ವಜ ಅಭಿಯಾನವನ್ನು ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರಂದು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ “ಶಾಲಾ ಮಕ್ಕಳಿಂದ ಜಾಗೃತಿ ಕ್ಯಾಲಿ” ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸ್ತಬ್ಧಚಿತ್ರ ವಾಹನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಉಪ ವಿಭಾಗಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಯೋಜನಾ ನಿರ್ದೇಶಕ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಾಣೇಶ, ಜಂಟಿ ಕೃಷಿ ನಿರ್ದೇಶಕ ಸದಾಶಿವ,ಕೆ.ಕೆ. ಆರ್.ಟಿ.ಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ ಮುಲ್ಲಾ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ – ಹುಸೇನಬಾಷ ಮೋತೆಖಾನ್.