ಮನೆ – ಮನದಲ್ಲಿ ರಾರಾಜಿಸಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜ.
ಇಂದು ಯಕ್ಸಂಬಾ ಪಟ್ಟಣದ ನಮ್ಮ ನಿವಾಸದ ಮೇಲೆ ಸ್ವಾತಂತ್ರ್ಯದ ಅಮೃತ್ ಮಹೋತ್ಸವದ ಈ ಸುಸಂದರ್ಭದಲ್ಲಿ ರಾಷ್ಟ್ರವ್ಯಾಪಿ ನಡೆಯುತ್ತಿರುವ “ಹರ್ ಘರ್ ತಿರಂಗಾ ಅಭಿಯಾನ”ದ ಅಂಗವಾಗಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಧ್ವಜಾರೋಹಣ ನೆರವೇರಿಸಿ, ಗೌರವ ಸಮರ್ಪಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯವರೆಗೆ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ, ಎಲ್ಲರೂ ಈ ಒಂದು ದೇಶ ಭಕ್ತಿಯ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ಜೈ ಹಿಂದ್!
ವರದಿ – ಮಹೇಶ ಶರ್ಮಾ