ಉಚಿತ ವಿದ್ಯುತ್ ಯೋಜನೆ ರದ್ಧತಿಗೆ ಆಮ್ ಆದ್ಮಿ ಪಕ್ಷದಿಂದ ಆಕ್ರೋಶ……
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ 40% ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ತಾನೇ ಘೋಷಣೆ ಮಾಡಿದ ಯೋಜನೆಯನ್ನು ಸಹ ಕಾರ್ಯಗತಗೊಳಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಣ್ಣಪುಟ್ಟ ಯೋಜನೆಗಳನ್ನು ಕೂಡ ಜಾರಿಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಆ ಕಾರಣಕ್ಕಾಗಿಯೇ ಎಸ್ ಸಿ ಮತ್ತು ಎಸ್ ಟಿ ಸಮುದಾಯದವರಿಗೆ ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ದೊಡ್ಡದಾಗಿ ಘೋಷಣೆ ಮಾಡಿ ಪ್ರಚಾರ ಪಡೆದುಕೊಂಡಿದ್ದ ಬಿಜೆಪಿ ಸರ್ಕಾರ ಈಗ ಯಾರಿಗೂ ಗೊತ್ತಾಗದಂತೆ ಯೋಜನೆಯನ್ನು ವಾಪಸ್ ಪಡೆದು ಜನಸಾಮಾನ್ಯರಿಗೆ ವಂಚನೆ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾದ ಲೋಹಿತ ಕುಮಾರ ಎಸ್ ರಾಮಶೆಟ್ಟಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಬಡ ಎಸ್ ಸಿ ಎಸ್ ಟಿ ಸಮುದಾಯದವರಿಗೆ ಅನ್ಯಾಯವಾಗಿದೆ ಅವರಿಗೆ ಸಿಗಬೇಕಾದ ಸೌಲತ್ತುಗಳನ್ನು ಸರ್ಕಾರವೇ ಕಿತ್ತುಕೊಂಡಿದೆ. ಆದರೆ ದೆಹಲಿಯಲ್ಲಿ ಅಧಿಕಾರ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ .200 ಯೂನಿಟ್ ವರೆಗೂ ಉಚಿತ ವಿದ್ಯುತ್ ನಾವು ನೀಡುತ್ತಿದ್ದೇವೆ. ಮತ್ತು ದಿನದ 24 ಗಂಟೆಯೂ ವಿದ್ಯುತ್ ಇರಲಿದೆ ಪಂಜಾಬ್ ನಲ್ಲೂ ಕೂಡ ಅಧಿಕಾರ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ಈಗಾಗಲೇ 24 ಗಂಟೆಯೂ ವಿದ್ಯುತ್ ನೀಡುವ ಮತ್ತು ಬಡವರಿಗಾಗಿ 300 ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಕಾರ್ಯಗತಗೊಳಿಸಿದೆ. ಆಮ್ ಆದ್ಮಿ ಪಕ್ಷದಿಂದ ದೆಹಲಿ ಮತ್ತು ಪಂಜಾಬ್ ನಲ್ಲಿ ಸಾಧ್ಯವಾಗಿದ್ದು ಯಾಕೆ ಕರ್ನಾಟಕದಲ್ಲಿ ಬಿಜೆಪಿಯಿಂದ ಸಾಧ್ಯವಾಗುತ್ತಿಲ್ಲ. ಕಾರಣ ದೆಹಲಿ ಮತ್ತು ಪಂಜಾಬ್ ನಲ್ಲಿ ಪ್ರಾಮಾಣಿಕ ಸರ್ಕಾರಗಳು ಆಡಳಿತ ನಡೆಸುತ್ತಿವೆ ಆದರೆ ರಾಜ್ಯದಲ್ಲಿರುವುದು ಭ್ರಷ್ಟ ಬಿಜೆಪಿ ಸರ್ಕಾರ . ಆದ್ದರಿಂದ ಬಡ ಜನರಿಗೆ ಯೋಜನೆಯನ್ನು ಜಾರಿಗೊಳಿಸುವ ಮತ್ತು ಅದನ್ನು ಅವರಿಗೆ ತಲುಪಿಸುವಂತಹ ವಿಚಾರದಲ್ಲಿ ಬಿಜೆಪಿ ರಾಜ್ಯ ಸರ್ಕಾರ ವಿಫಲವಾಗಿದೆ. ಎಸ್ ಸಿ ಎಸ್ ಟಿ ಸಮುದಾಯದವರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಆಮ್ ಆದ್ಮಿ ಪಕ್ಷ ಬಲವಾಗಿ ಖಂಡಿಸುತ್ತದೆ ಎಂದು ಆಮ್ ಆದ್ಮಿ ಪಕ್ಷದ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಲೋಹಿತ ಕುಮಾರ ಎಸ್ ರಾಮಶೆಟ್ಟಿ ಪತ್ರಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸರ್ಕಾರವು ಈ ಕೂಡಲೇ ಯೋಜನೆಯ ರದ್ದತಿ ಆದೇಶವನ್ನು ವಾಪಸ್ ಪಡೆಯಬೇಕು ಮತ್ತು ಮೊದಲು ಘೋಷಿಸಿದಂತೆ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಉಚಿತ ವಿದ್ಯುತ್ ಯೋಜನೆ ಬಡ ಎಸ್ ಸಿ ಎಸ್ ಟಿ ಸಮುದಾಯದವರ ಹಕ್ಕಾಗಿದ್ದು ಅದನ್ನು ಸರ್ಕಾರ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದೆ. ಕೂಡಲೇ ಸರ್ಕಾರ ರದ್ದತಿ ಆದೇಶವನ್ನು ವಾಪಸ್ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸದೆ ಹೋದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಎಸ್ ಸಿ ಎಸ್ ಟಿ ಸಮುದಾಯದೊಂದಿಗೆ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವರದಿ – ಸಂಪಾದಕೀಯಾ