ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ.
ಕನಕಗಿರಿ:ಮಂಡಲ ಯುವ ಮೋರ್ಚಾ ಅಧ್ಯಕ್ಷ ಚೇತನ ಕುಮಾರ್ ಶ್ರೇಷ್ಠಿ ಪಕ್ಷದಲ್ಲಿ ಪ್ರಾಮಾಣಿಕತೆಗೆ ಬೆಲೆ ಇಲ್ಲ ಹಾಗೂ ಶಾಸಕ ಬಸವರಾಜ ದಡೇಸೂಗೂರು ಕಾರ್ಯ ವೈಖರಿ ಸರಿ ಇಲ್ಲ ಎಂದು ಬೇಸತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಹದಗೆಟ್ಟಿದ್ದು ಸಾಕಷ್ಟು ಕಾರ್ಯಕರ್ತರು ಪಕ್ಷ ತ್ಯಜಿಸುವುದು ಖಚಿತ ಎಂಬುದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.2023 ರ ವಿಧಾನಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲಿ ಪಕ್ಷಕ್ಕೆ ರಾಜಿನಾಮೆ ಕೊಡುವುದು ಸಹಜವಾಗಿದ್ದರೂ, ಕಾರ್ಯಕರ್ತರನ್ನು ಪಕ್ಷದಲ್ಲಿ ಉಳಿಸಿಕೊಂಡು ಆಗಿರುವ ತಪ್ಪುಗಳನ್ನು ಸರಿಪಡಿಸಿ ಬರುವ ದಿನಗಳಲ್ಲಿ ಪಕ್ಷ ಇನ್ನಷ್ಟು ಗಟ್ಟಿಯಾಗಿರಬೇಕಾದರೆ ಏನು ಕ್ರಮ ವಹಿಸಬೇಕು ಎನ್ನುವ ಆಲೋಚನೆಗಳನ್ನು ಪಕ್ಷದ ಜಿಲ್ಲಾ ಮತ್ತು ರಾಜ್ಯ ಮುಖಂಡರು ಮಾಡಬೇಕು ಇಲ್ಲದಿದ್ದರೆ ಕ್ಷೇತ್ರದಲ್ಲಿ ಪಕ್ಷ ತುಂಬಾ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಹೆಸರೇಳಲಿಚ್ಚಿಸದ ಬಿಜೆಪಿ ಕಟ್ಟಾ ಕಾರ್ಯಕರ್ತರು ಪತ್ರಿಕೆಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ವರದಿ – ಆದಪ್ಪ ಮಾಲಿ ಪಾಟೀಲ್