ಜನಸ್ಪಂದನ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ಭಾಗಿ….

Spread the love

ಜನಸ್ಪಂದನ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ಭಾಗಿ.

ದೊಡ್ಡಬಳ್ಳಾಪುರದಲ್ಲಿ ಜರುಗಿದ, ರಾಜ್ಯ ಬಿಜೆಪಿ ಸರಕಾರದ ಮೂರು ವರ್ಷಗಳ ಸಾಧನೆಯ ಅನಾವರಣ, ಜನಸ್ಪಂದನ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು , ನಿಮ್ಮ ನಿಮ್ಮೆಲ್ಲರ ನೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿ ಅವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಜಿ, ಕೇಂದ್ರ ಸಚಿವರಾದ ಶ್ರೀಮತಿ ಸ್ಮೃತಿ ಇರಾನಿ ಜಿ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ಜಿ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ನಳೀನ್ ಕುಮಾರ್ ಕಟೀಲ್ ಜಿ ಅವರ ಉಪಸ್ಥಿತಿಯಲ್ಲಿ ಈ ಬೃಹತ್ ಕಾರ್ಯಕ್ರಮ ಜರುಗಿತು. ಜನಸ್ಪಂದನ ಕಾರ್ಯಕ್ರಮಕ್ಕೆ ರಾಜ್ಯದ ಜನತೆಯ ಅಭೂತಪೂರ್ವ ಬೆಂಬಲ ದೊರಕಿದೆ.‌ ಕಾರ್ಯಕ್ರಮದಲ್ಲಿ ಸರಕಾರದ ಮೂರು ವರ್ಷಗಳ ಸಾಧನೆಗಳನ್ನು ಜನತೆಗೆ ತಲುಪಿಸಲಾಯಿತು. ಈ ಕಾರ್ಯಕ್ರಮವು ಬಿಜೆಪಿ ಸರ್ಕಾರದ ಅಭಿವೃದ್ಧಿ ಪರ್ವಕ್ಕೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯದ  ಹಿರಿಯರು ಮುಖಂಡರುಗಳು, ಯುವ ಮುಖಂಡರುಗಳು ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *